ನವದೆಹಲಿ:
ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಹಾಗೂ ಭಾರತ ರತ್ನ ಪುರಸ್ಕೃತ ಪ್ರಣಬ್ ಮುಖರ್ಜಿಯವರಿಗೆ ಮಹಾಮಾರಿ ಕೊರೋನಾ ವೈರಸ್ ತಗುಲಿರುವುದು ದೃಢಪಟ್ಟಿದೆ ಎಂದು ಸೋಮವಾರ ತಿಳಿದುಬಂದಿದೆ. ಪ್ರಣಬ್ ಮುಖರ್ಜಿ ಅವರು ಸ್ವತಃ ಟ್ವಿಟ್ಟರ್ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ನನಗೆ ಕೊರೊನಾ ಸೋಂಕು ತಗುಲಿದೆ.ಬೇರೆ ಯಾವುದೋ ಕಾರಣಕ್ಕಾಗಿ ಆಸ್ಪತ್ರೆಗೆ ತೆರಳಿದ್ದಾಗ, ಮಾಡಿಸಿದ ಪರೀಕ್ಷೆಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಯಾರ್ಯಾರು ನನ್ನ ಸಂಪರ್ಕಕ್ಕೆ ಬಂದಿದ್ದಾರೆ ಅವರೆಲ್ಲರೂ ಗೃಹಬಂಧನದಲ್ಲಿರಿ ಎಂದು ಮುಖರ್ಜಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ