ಬೆಳ್ಳಾರೆ :

ರಸ್ತೆಗೆ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಷಿಸಿ ಬೈಕ್ ಸವಾರರೊಬ್ಬರು ಬೈಕ್ ಸಹಿತವಾಗಿ ಸಜೀವ ದಹಿಸಿದ ಘಟನೆ ದಕ್ಷಿಣಕನ್ನಡ ಕಡಬ ತಾಲೂಕಿನ ನಿಂತಿಕಲ್ಲು ಬಳಿ ಮಂಗಳವಾರ ಮುಂಜಾನೆ ನಡೆದಿದೆ.
ಸುಳ್ಯ ತಾಲೂಕಿನ ಮಂಡೆಕೋಲು ನಿವಾಸಿಯಾದ ಇವರು ಮುಂಜಾನೆ 5.45ರ ಸುಮಾರಿಗೆ ನಿಂತಿಕಲ್ಲು ಕಡೆಗೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಈ ವೇಳೆಗೆ ವಿದ್ಯುತ್ ಕಂಬದ ಇನ್ಸುಲೇಟರ್ ನಿಂದ ತಪ್ಪಿ ರಸ್ತೆಗೆ ಬಿದ್ದ ವಿದ್ಯುತ್ ತಂತಿಯನ್ನು ಗಮನಿಸದೆ ಭೀಕರ ಅನಾಹುತ ನಡೆದಿದೆ ಎಂದು ವರದಿಯಾಗಿದೆ.
ಸವಾರ ಮತ್ತು ವಾಹನ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








