ನವದೆಹಲಿ :
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 53,601 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 22,68,675ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಬೆಳಗ್ಗೆ ಈ ಕುರಿತು ಮಾಹಿತಿ ನೀಡಿದ್ದು, ಕಳೆದ 24 ಗಂಟೆ ಅವಧಿಯಲ್ಲಿ 53,601 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, 871 ಸಾವು ಸಂಭವಿಸಿದೆ. ಈವರೆಗೆ ಒಟ್ಟು 45,257 ಮಂದಿ ಮೃತಪಟ್ಟಿದ್ದಾರೆ.
ಇದರೊಂದಿಗೆ, ಒಟ್ಟು ಸೋಂಕಿತರ ಸಂಖ್ಯೆ 22,68,676 ತಲುಪಿದೆ. ಒಟ್ಟು ಸೋಂಕಿತರ ಪೈಕಿ, 15,83,490 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ದೇಶದಲ್ಲಿ 6,39,929 ಸಕ್ರಿಯ ಪ್ರಕರಣಗಳಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ