ಬೆಂಗಳೂರು
ಪ್ರವಾದಿ ಮಹಮ್ಮದ್ ಪೈಗಂಬರರನ್ನು ವ್ಯಕ್ತಿಯೊಬ್ಬ ನಿಂದಿಸಿರುವುದು ವೈಯ ಕ್ತಿಕವಾಗಿ ನನಗೂ ಸಾಕಷ್ಟು ನೋವಾಗಿದೆ.ನಮ್ಮ ನೋವು,ಆಕ್ರೋಶವನ್ನು ಕಾನೂನು ಹೋರಾಟದ ಮೂಲಕದ ತೋರಿಸಿ,ಕಠಿಣ ಶಿಕ್ಷೆಗೆ ಆಗ್ರಹಿಸಬೇಕೇ ಹೊರತು ಅಶಾಂತಿಯ ಮೂಲಕವಲ್ಲ.ನ್ಯಾಯಕ್ಕಾಗಿ ನಡೆಸುವ ಕಾನೂ ನು ಹೋರಾಟದಲ್ಲಿ ನಾನೂ ನಿಮ್ಮ ಜೊತೆಗಿರುತ್ತೇನೆ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಟ್ವೀಟ್ ಮೂಲಕ ಡಿ.ಜೆ ಹಳ್ಳಿ,ಕೆ.ಜೆ.ಹಳ್ಳಿ ಜನರಲ್ಲಿ ಮನವಿ ಮಾಡಿದ್ದಾರೆ.
ಪುಲಿಕೇಶಿ ನಗರ ವಿಧಾನ ಸಭಾ ಕ್ಷೇತ್ರದಲ್ಲಿ ಮೊನ್ನೆ ಸಂಜೆ ನಡೆದ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾ ಜಿಕ ಜಾಲ ತಾಣದಲ್ಲಿ ಮನವಿ ಮಾಡಿರುವ ಅವರು,ಗೋಲಿಬಾರ್‍ನಿಂದ ಮೃತಪಟ್ಟ ಯುವಕರ ಮನೆಗೆ ನಿನ್ನೆ ಭೇಟಿ ನೀಡಿದ್ದೆ,ನಿಜಕ್ಕೂ ಅವರ ಕುಟುಂಬಗಳ ಪರಿಸ್ಥಿತಿ ಕಂಡು ಕಣ್ಣೀರು ಬಂತು.ಇದ್ದ ಒಬ್ಬ ಮಗನನ್ನು ಕಳೆದುಕೊಂಡ ತಾಯಿ,ತಂಗಿಗೆ ಯಾರು ದಿಕ್ಕು ಯಾರೋ ಕಿಡಿಗೇಡಿಗಳು ಕಲ್ಲು ತೂರಿ,ಬೆಂಕಿ ಹಚ್ಚಿದರು,ಬಲಿಯಾದವರು ಇನ್ಯಾರೋ ಎಂದಿದ್ದಾರೆ ಎಂದು ಹೇಳಿದ್ದಾರೆ.
ಘಟನೆ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳು, ಧಾರ್ಮಿಕ ಮುಖಂಡರೊಂದಿಗೆ ಚರ್ಚೆ ಮಾಡಿದ್ದೇನೆ.ತಪ್ಪಿತ ಸ್ಥರಿಗೆ ಖಂಡಿತಾ ಕಠಿಣ ಶಿಕ್ಷೆ ಆಗಲಿದೆ.ಗಾಳಿ ಸುದ್ದಿಗಳಿಗೆ ಕಿವಿ ಕೊಡಬೇಡಿ,ಕಾನೂನು ಹೋರಾಟದ ಮೂಲಕ ನ್ಯಾಯ ಪಡೆಯುವ ನಮ್ಮ ನಿರ್ಧಾರ ಅಚಲವಾಗಿರಲಿ .ಶಾಂತಿ, ಸೌಹಾರ್ದತೆಗೆ ಎಲ್ಲರೂ ಸಹಕರಿಸಿ ಎಂದು ಕೈ ಮುಗಿದ್ದು ಮನವಿ ಮಾಡುತ್ತೇನೆ ಎಂದು ಜಮೀರ್ ಅಹ್ಮದ್ ಖಾನ್ ಅವರು ಮನವಿ ಮಾಡಿಕೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ