ಹುಳಿಯಾರು
ಚಿತ್ರದುರ್ಗ ಜಿಲ್ಲೆ ಹೊಸದುರ್ಗ ಕನಕ ಶಾಖಾಮಠದಿಂದ ಪ್ರತಿವರ್ಷದಂತೆ ಈ ವರ್ಷವೂ ಸಹ ಕುರುಬ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ತಿಳಿಸಿದ್ದಾರೆ.
2019-20 ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ 90 ಕ್ಕಿಂತ ಹೆಚ್ಚು ಅಂಕ ಪಡೆದಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳು ತಾವು ಪಡೆದ ಅಂಕಪಟ್ಟಿ ಮತ್ತು ವರ್ಗಾವಣೆ ಪತ್ರ ಇವುಗಳ ಜೆರಾಕ್ಸ್ ಪ್ರತಿಗಳನ್ನು ಶ್ರೀಮದ್ ಜಗದ್ಗುರು ರೇವಣಸಿದ್ದೇಶ್ವರ ಸಿಂಹಾಸನ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಶಾಖಾಮಠ ಕನಕಧಾಮ, ಹೊಸದುರ್ಗ ತಾಲ್ಲೂಕು, ಚಿತ್ರದುರ್ಗ ಜಿಲ್ಲೆ 577527 ಈ ವಿಳಾಸಕ್ಕೆ ಅಂಚೆ ಮೂಲಕ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಮಹೇಶ್ ಗೌಡ 9480111933, ಯೋಗೀಶ್ ಸಾವಂತ 9743001066 ಇವರನ್ನು ಸಂಪರ್ಕಿಸಬಹುದಾಗಿದ್ದು ಪ್ರತೀ ವರ್ಷ ಜುಲೈ 22 ರಂದು ನಡೆಯುತ್ತಿದ್ದ ಕಾರ್ಯಕ್ರಮವು ಕೋವಿಡ್-19 ಬಂದಿದ್ದರಿಂದ ರದ್ದು ಪಡಿಸಲಾಗಿತ್ತು. ಕೋವಿಡ್-19 ಸುದಾರಿಸಿದ ಮೇಲೆ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಸ್ವಾಮೀಜಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








