ಕೋವಿಡ್ ಮುನ್ನೆಚ್ಚರಿಕೆಯಿಂದ ಸ್ವಾತಂತ್ರ್ಯೋತ್ಸವ ಸಿದ್ಧತೆ

ಹಾವೇರಿ

      ಕೋವಿಡ್-19 ಸುರಕ್ಷಾ ಮಾರ್ಗಸೂಚಿ ಅನುಸಾರ ಸಾಮಾಜಿಕ ಅಂತರ ಕಾಯ್ದುಕೊಂಡು ಜಿಲ್ಲಾಡಳಿತದಿಂದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಆಗಸ್ಟ್ 15 ರಂದು ಆಯೋಜಿಸಿರುವ 74ನೇ ಸ್ವಾತಂತ್ರ್ಯೋತ್ಸವಕ್ಕೆ ನಡೆಸಿರುವ ಸಿದ್ಧತೆಗಳ ಕುರಿತಂತೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ ಅವರು ಪರಿಶೀಲನೆ ನಡೆಸಿದರು.

    ಶುಕ್ರವಾರ ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿ, ಕ್ರೀಡಾಂಗಣದ ಸಿದ್ಧತೆ, ಗಣ್ಯರಿಗೆ ಆಹ್ವಾನಿತರಿಗೆ ಸಾಮಾಜಿಕ ಅಂತರದಲ್ಲಿ ಆಸನ ವ್ಯವಸ್ಥೆ, ಕವಾಯತ್‍ನಲ್ಲಿ ಭಾಗವಹಿಸುವ ಗೃಹರಕ್ಷಕದಳ ಹಾಗೂ ಪೊಲೀಸ್ ರಿರ್ಹಸಲ್ ವೀಕ್ಷಣೆ ಮಾಡಿದರು.ಅಂದು ಬೆಳಿಗ್ಗೆ 7-45 ಗಂಟೆಗೆ ಎಲ್ಲ ಗಣ್ಯರು ಹಾಗೂ ಅಧಿಕಾರಿಗಳು ಹುತಾತ್ಮ ಮೈಲಾರ ಮಹಾದೇವ ವೃತ್ತದಲ್ಲಿರುವ ಹುತಾತ್ಮ ಶ್ರೀ ಮೈಲಾರ ಮಹಾದೇವರ ಪ್ರತಿಮೆಗೆ ಮಾರ್ಲಾಪಣೆ ಕಾರ್ಯಕ್ರಮ, ಬೆಳಿಗ್ಗೆ 9 ಗಂಟೆಗೆ ಹೊಸಮನಿ ಸಿದ್ದಪ್ಪ ಕ್ರೀಡಾಂಗಣದಲ್ಲಿ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ರಾಷ್ಟ್ರ ಧ್ವಜಾರೋಹಣ, ಬೆಳಿಗ್ಗೆ 9-05ಕ್ಕೆ ಪಥ ಪರಿವೀಕ್ಷಣೆ, 9-15ಕ್ಕೆ ಪಥ ಸಂಚಲನ, 9-30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ವಾತಂತ್ರ್ಯೋತ್ಸವ ಸಂದೇಶ ಹಾಗೂ 10 ಗಂಟೆಗೆ ಕರೋನಾ ವಾರಿಯರ್ಸರಗೆ ಸನ್ಮಾನ ಕಾರ್ಯಕ್ರಮ ಆಯೋಜನೆ ಕುರಿತಂತೆ ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

    ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ ದೇಸಾಯಿ, ಅಪರ ಜಿಲ್ಲಾಧಿಕಾರಿ ಎಸ್.ಯೋಗೇಶ್ವರ, ಉಪವಿಭಾಗಾಧಿಕಾರಿ ಡಾ.ದಿಲೀಷ್ ಶಶಿ, ತಹಶೀಲ್ದಾರ ಶಂಕರ, ಡಿ.ವೈ.ಎಸ್.ಪಿ. ಸಂತೋಷಕುಮಾರ ವಿಜಯಕುಮಾರ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link