ಆಸ್ಸಾಂನ ಪಶ್ಚಿಮ ಕಾರ್ಬಿ ಆಂಗ್ಲಾಂಗ್ನಲ್ಲಿರು ಮಾರುಕಟ್ಟೆ ಪ್ರದೇಶದಲ್ಲಿ ಸುಮಾರು 50 ಅಂಗಡಿಗಳು ಬೆಂಕಿಗೆ ಆಹುತಿಯಾಗಿ, 1 ಕೋಟಿ ರೂಪಾಯಿ ನಷ್ಟವುಂಟಾಗಿದೆ.
ಬೆಂಕಿ ಅವಘಡದಲ್ಲಿ ಯಾರೂ ಸಾವನ್ನಪ್ಪಿದ ಬಗ್ಗೆ ವರದಿಯಾಗಿಲ್ಲ. ಮೊದಲು ಬೆಂಕಿ ಕಾಣಿಸಿಕೊಂಡಿದ್ದು ಕಿರಾಣಿ ಅಂಗಡಿಯೊಂದರಲ್ಲಿ. ನಂತರ ಅದರ ಅಕ್ಕಪಕ್ಕದಲ್ಲಿದ್ದ ವ್ಯಾಪಾರಿ ಮಳಿಗೆಗಳು, ಉಳಿದ ಅಂಗಡಿಗಳಿಗೂ ಪಸರಿಸಿ, ಅನಾಹುತವಾಗಿದೆ.
ಬೆಂಕಿಯನ್ನು ನೋಡಿದ ಸ್ಥಳೀಯರು ಅದನ್ನು ನಂದಿಸಲು ಪ್ರಯತ್ನಿಸಿದ್ದಾರೆ. ಅಷ್ಟೇ ಅಲ್ಲ, ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರಿಗೂ ಕರೆ ಮಾಡಿದ್ದಾರೆ.
ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಹೊತ್ತಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
