ತುಮಕೂರು:
ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ಎಂಬುವವರು ವಿವಿಧ ಜಾತಿಗಳನ್ನು ನಿಂದಿಸಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಯುವ ಕಾಂಗ್ರೆಸ್ ಘಟಕದ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಲಾಗಿದೆ. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಾರ್ಟಿಯಿಂದ ನಗರದಲ್ಲಿ ಸರಳವಾಗಿ ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರತಿಭಟನೆ ನಡೆಸಿ, ಸಂಬಿತ್ ಪಾತ್ರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶರತ್ ಕುಮಾರ್, ತಿಳಿಸಿದರು.ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಜನಿಕಾಂತ್, ವೇಣು ಜೈನ್, ಶೇಕ್ ಫಯಾಜ್, ರಂಗನಾಥ್, ಮಧುಸೂದನ್ ಮುಂತಾದವರು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








