ವಸತಿ ರಹಿತರಿಗೆ ನಿವೇಶನ ನೀಡಲು ಕ್ರಮ: ಜಿ.ಎಸ್.ಬಸವರಾಜು

ತುಮಕೂರು:

     ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ 2022ರೊಳಗೆ ಹೌಸಿಂಗ್ ಫಾರ್‍ಆಲ್ ಯೋಜನೆಯಡಿ ವಸತಿ ರಹಿತರಿಗೆ ನಿವೇಶನ ನೀಡಲು ಒಂದು ತಿಂಗಳೊಳಗಾಗಿ ಸರ್ಕಾರಿ ಜಮೀನು ಗುರುತಿಸಿ ಜಿಐಎಸ್ ಲೇಯರ್ ಮಾಡಿ ಜಿಲ್ಲಾಧಿಕಾರಿ ಗಳಿಗೆ ಸಲ್ಲಿಸಲಾಗುವುದು ಎಂದು ರೆವಿನ್ಯೂ ಇಲಾಖೆಯ ಅಧಿಕಾರಿಗಳು ಸಂಸದ ಜಿ.ಎಸ್.ಬಸವರಾಜ್‍ರವರ ಸಮ್ಮುಖದಲ್ಲಿ ಪ್ರತಿಜ್ಞೆ ಮಾಡಿದರು.

    ನಗರದ ಸಾಯಿಬಾಬಾ ಟೆಂಪಲ್‍ನ ಆಡಿಟೋರಿಯಂನಲ್ಲಿ ಸಂಸದ ಜಿ.ಎಸ್.ಬಸವರಾಜು ಅಧ್ಯಕ್ಷತೆಯಲ್ಲಿ ನಡೆದ ಸಂಸದರ ಆದರ್ಶ ಗ್ರಾಮ ಯೋಜನೆ, ದಿಶಾ ಸಮಿತಿ ಪ್ರಗತಿ ಪರೀಶಿಲನಾ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಬಡವರಿಗೆ ಸೇವೆ ಮಾಡಲೇ ಬೇಕು ಎಂದು ಮನಸ್ಸು ಮಾಡಿದರೆ ನಿವೇಶನ ನೀಡುವುದು ಸಮಸ್ಯೆಯೇ ಅಲ್ಲ ಎಂದ ಅವರು, ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗ್ರಾಮವಾರು ಸರ್ಕಾರಿ ಜಮೀನು ಗುರುತಿಸಲು ಕರೆನೀಡಿದರು.

    ತುಮಕೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ, ಗುಬ್ಬಿ ತಾಲ್ಲೂಕು, ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಯನ್ನು ಸಂಸದರ ಆದರ್ಶ ಗ್ರಾಮ ಯೋಜನೆಗೆ ಆಯ್ಕೆ ಮಾಡಿಕೊಂಡಿರುವ ಹಿನ್ನಲೆಯಲ್ಲಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ 18 ಗ್ರಾಮಗಳಲ್ಲಿನ ಎಲ್ಲಾ ವಿಧವಾದ ‘ಸರ್ಕಾರಿ ಜಮೀನುಗಳ ಜಿಐಎಸ್ ಲೇಯರ್’ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

    ತುಮಕೂರು ಮಹಾನಗರ ಪಾಲಿಕೆಯ ಸುತ್ತ 10 ಕಿಮೀ ವ್ಯಾಪ್ತಿಯ ಸರ್ಕಾರಿ ಜಮೀನು ಗುರುತಿಸಿ ಪಟ್ಟಿ ಮಾಡಿದ್ದು, ಬಗರ್ ಹುಕುಂ ಯೋಜನೆಯಡಿಯಲ್ಲಿ ಜಮೀನು ಮಂಜೂರಾತಿಗೆ ರೈತರು ಅರ್ಜಿ ಸಲ್ಲಿಸಿದ್ದಾರೆ, ನಿಯಮ ಪ್ರಕಾರ ಪಾಲಿಕೆಯ ಸುತ್ತ 10 ಕಿಮೀ ವ್ಯಾಪ್ತಿಯಲ್ಲಿ ಜಮೀನು ಮಂಜೂರು ಮಾಡಲು ಸಾಧ್ಯವಿಲ್ಲ, ಈ ಜಮೀನನ್ನು ಬಡವರಿಗೆ ನಿವೇಶನ ನೀಡಲು ಮತ್ತು ಸರ್ಕಾರಿ ಯೋಜನೆಗಳಿಗೆ ಮೀಸಲಿರಿಸುವಂತೆ ತಿಳಿಸಿದರು.

    ತುಮಕೂರು ಉಪವಿಭಾಗಾಧಿಕಾರಿಯಾದ ಅಜಯ್ ಮಾತನಾಡಿ, ಸಂಸದರ ಆದರ್ಶಗ್ರಾಮವನ್ನು ಮಾದರಿಯಾಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮವಹಿಸಬೇಕು ಹಾಗೂ ಪ್ರಧಾನ ಮಂತ್ರಿ ಹೌಸಿಂಗ್ ಫಾರ್ ಆಲ್ ಯೋಜನೆಯಡಿ ಅರ್ಹರಿಗೆ ನಿವೇಶನ ಹಂಚಲು, ವಸತಿರಹಿತರ ಪಟ್ಟಿಯನ್ನು ತಯಾರಿಸುವಂತೆ ಸೂಚಿಸಿದ ಅವರು, ಸೆಪ್ಟೆಂಬರ್05ರಂದು ನಡೆಯಲಿರುವ ಮುಂದಿನ ಸಭೆಯ ವೇಳೆಗೆ ಅಗತ್ಯವಿರುವ ಎಲ್ಲ ಮಾಹಿತಿ ಹಾಗೂ ದಾಖಲೆಗಳನ್ನು ತರುವಂತೆ ಸೂಚಿಸಿದರು.

    ಸಭೆಯಲ್ಲಿ ದಿಶಾಸಮಿತಿ ಸದಸ್ಯ ಕುಂದರನಹಳ್ಳಿ ರಮೇಶ್, ತುಮಕೂರು ತಾಲ್ಲೂಕು ತಹಶೀಲ್ದಾರ್ ಮೋಹನ್ ಕುಮಾರ್, ಗುಬ್ಬಿ ತಹಶೀಲ್ದಾರ್ ಪ್ರದೀಪ್‍ಕುಮಾರ್ ಸೇರಿದಂತೆ ರೆವಿನ್ಯೂ ಇನ್‍ಸ್ಪೆಕ್ಟರ್, ತಾಲ್ಲೂಕು ಸರ್ವೇಯರ್, ಕೇಸ್ ವರ್ಕರ್ ಮತ್ತು ಗ್ರಾಮ ಲೆಕ್ಕಿಗರು ಭಾಗವಹಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap