ಬೆಂಗಳೂರು:
ವೈದ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಇನ್ನೆಷ್ಟು ದಿನಗಳು ಬೇಕು ಎಂದು ಕೆಪಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು. ಕೊರೊನಾ ವಾರಿಯರ್ಸ್ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಕೆಲಸ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಡಾ. ನಾಗೇಂದ್ರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಸಾವಿಗೆ ಕಾರಣರಾದ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಇನ್ನೆಷ್ಟು ದಿನ ಬೇಕು ಎಂದು ಅವರು ಪ್ರಶ್ನಿಸಿದ್ದಾರೆ.ಆತ್ಮಹತ್ಯೆ ಪ್ರಕರಣದ ಕುರಿತಾಗಿ ಮೃತರ ಪತ್ನಿ ಆರೋಪ ಮಾಡಿದ್ದಾರೆ. ಪ್ರಕರಣವನ್ನು ಯಾಕೆ ಮುಚ್ಚಿ ಹಾಕುತ್ತಿದ್ದೀರಾ ಎಂದು ಪ್ರಶ್ನಿಸಿದ ಅವರು ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕೊರೊನಾ ಸಂಕಷ್ಟದ ಅವಧಿಯಲ್ಲಿ ಆರು ತಿಂಗಳು ಬೇರೆ ಮನೆ ಮಾಡಿ ಕೆಲಸ ಮಾಡಿದವರ ಬಗ್ಗೆ ಬಾಯಿಗೆ ಬಂದ ಹಾಗೆ ಬೈದಿದ್ದಾರೆ. ಇದರಿಂದ ನೊಂದು ಡಾ.ನಾಗೇಂದ್ರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತಾಗಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಬೇಕು ಎಂದು ಆಗ್ರಹಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ