‘ಅಂತಿಮ ವರ್ಷದ ಪದವಿ ಪರೀಕ್ಷೆ ನಡೆಸಬೇಕು’- ಸುಪ್ರೀಂ

ನವದೆಹಲಿ :

     ಪರೀಕ್ಷೆಯಿಲ್ಲದೇ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಪಾಸ್​​ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್​ ಹೇಳಿದೆ.

      ವಿಶ್ವವಿದ್ಯಾಲಯದ ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸಬೇಕೆಂಬ ವಿಶ್ವವಿದ್ಯಾಲಯ ಅನುದಾನ ಆಯೋಗದ(ಯುಜಿಸಿ) ಅಧಿಸೂಚನೆಯನ್ನು ಎತ್ತಿ ಹಿಡಿದಿರುವ ಸುಪ್ರೀಂ ಕೋರ್ಟ್‌, ಸೆಪ್ಟೆಂಬರ್ 30ರೊಳಗೆ ಅಂತಿಮ ಪರೀಕ್ಷೆಗಳನ್ನು ನಡೆಸದೇ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

      ಇನ್ನು, ಪದವಿ ಪರೀಕ್ಷೆಗಳನ್ನು ನಡೆಸಲು ಸೆಪ್ಟೆಂಬರ್​​​ 30ರ ಗಡುವೇ ಅಂತಿಮವಲ್ಲ. ಬದಲಿಗೆ ಸೆಪ್ಟೆಂಬರ್ 30ರ ಗಡುವನ್ನು ವಿಸ್ತರಿಸಲು ರಾಜ್ಯಗಳು ಯುಜಿಸಿಯನ್ನು ಸಂಪರ್ಕಿಸಬಹುದು ಎಂದು ತೀರ್ಪು ನೀಡಿದೆ. 

      ಕೊರೋನ ವೈರಸ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕಾಲೇಜಿನ ಪದವಿ ಪರೀಕ್ಷೆಗಳನ್ನು ರದ್ದುಪಡಿಸಬೇಕೆಂದು ಎಂದು ಆಗ್ರಹಿಸಿ ಯುವ ಸೇನೆಯ ನಾಯಕ ಆದಿತ್ಯ ಠಾಕ್ರೆ ಸಹಿತ ಹಲವು ಅರ್ಜಿದಾರರು ನ್ಯಾಯಾಲಯ ಮೊರೆ ಹೋಗಿದ್ದರು.ಕೊರೋನ ವೈರಸ್‌ನಿಂದ ಎಲ್ಲ ಶಿಕ್ಷಣಸಂಸ್ಥೆಗಳು ಮುಚ್ಚಲ್ಪಟ್ಟಿರುವ ಕಾರಣ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಂಕಷ್ಟದ ಕುರಿತು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು. ಹೀಗಾಗಿ ಪರೀಕ್ಷೆಗಳನ್ನು ರದ್ದುಪಡಿಸಬೇಕೆಂದು ಆಗ್ರಹಿಸಿದ್ದರು.

     ಸೆಪ್ಟಂಬರ್ ಅಂತ್ಯಕ್ಕೆ ಪರೀಕ್ಷೆಗಳನ್ನು ನಡೆಸುವಂತೆ ಯುನಿವರ್ಸಿಟಿ ಗ್ರಾಂಟ್ಸ್ ಕಮಿಶನ್(ಯುಜಿಸಿ)ಆದೇಶಿಸಿತ್ತು. ವಿದ್ಯಾರ್ಥಿಗಳ ಶೈಕ್ಷಣಿಕೆ ಭದ್ರತೆಯನ್ನು ರಕ್ಷಿಸಲು ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.ಪರೀಕ್ಷೆಗಳಿಲ್ಲದೆ ಪದವಿ ಪ್ರಮಾಣಪತ್ರ ನೀಡಲು ಸಾಧ್ಯವಿಲ್ಲ ಎಂದು ಯುಜಿಸಿ ವಾದಿಸಿತ್ತು.

      ಆದರೆ, ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲು ರಾಜ್ಯ ಸರ್ಕಾರಗಳು ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸಲೇಬೇಕು. ಆದರೆ, ಕೊರೊನಾ ಸೋಂಕು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ವಿಪತ್ತು ನಿರ್ವಹಣೆ ಕಾಯ್ದೆಯಡಿಯಲ್ಲಿ ಪರೀಕ್ಷೆಗಳನ್ನು ಮುಂದೂಡುವ ಅಥವಾ ಪರೀಕ್ಷೆ ನಡೆಸುವುದಕ್ಕಾಗಿ ದಿನಾಂಕ ನಿಗದಿಪಡಿಸಲು ರಾಜ್ಯ ಸರ್ಕಾರಗಳು ಯುಜಿಸಿಯನ್ನು ಸಂಪರ್ಕಿಸಬಹುದು ಎಂದು ನ್ಯಾಯಾಲಯ ಹೇಳಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap