ಹುಬ್ಬಳ್ಳಿ
ಸ್ಯಾಂಡಲ್ ವುಡ್ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಯಾವ ಮಾಹಿತಿ ನೀಡುತ್ತಾರೋ ನೋಡೋಣ ಎಂದು ಗೃಹಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.ಸ್ಯಾಂಡಲ್ ವುಡ್ ಗೆ ಗಾಂಜಾ ನಂಟಿದೆ ಎಂಬುದರ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಸಿಬಿಗೆ ತನಿಖೆ ಮಾಡುವಂತೆ ಸೂಚಿಸಿದ್ದೇನೆ. ಶನಿವಾರ ಸ್ಯಾಂಡಲ್ ವುಡ್ ನಿರ್ದೇಶಕ ಇಂದ್ರಜಿತ್ ಲಂಕೇಶ್ ಗೆ ನೋಟಿಸ್ ನೀಡಲಾಗಿದೆ.
ಇಲ್ಲಿಯವರೆಗೆ ಗಾಂಜಾ ಮಾರಾಟ ಮಾಡುತ್ತಿದ್ದವರನ್ನು ಬಂಧಿಸಲಾಗುತ್ತಿತ್ತು. ಈಗ ಡಾರ್ಕ್ ನೈಟ್ ಆನ್ ಲೈನ್ ವೆಬ್ ಸೈಟ್ ಭೇದಿಸುತ್ತಿದ್ದೇವೆ ಎಂದರು. ಇನ್ನು,ಪೋಸ್ಟಲ್ ಮೂಲಕವು ಮಾದಕ ವಸ್ತು ಸರಬರಾಜು ಆಗುತ್ತಿತ್ತು. ಅಂತಾರಾಜ್ಯ, ವಿದೇಶಿ ಮೂಲವನ್ನು ನಾವು ಭೇದಿಸಿದ್ದೇವೆ. ಸಿಂಥೇಟಿಕ್ ಡ್ರಗ್ಸ್ ವ್ಯವಹಾರ ಮಾಡುತ್ತಿದ್ದವರನ್ನು ಬಂಧಿಸಿದ್ದಾರೆ. ಅದರಲ್ಲಿ ಚಿತ್ರರಂಗದ ಕೆಲವರು ಭಾಗಿಯಾಗಿದ್ದಾರೆ ಎಂಬ ಮಾಹಿತಿ ಇದ್ದು, ತನಿಖೆ ನಡೆಯುತ್ತಿದೆ ಎಂದರು.
ಇದರಲ್ಲಿ ಯಾರೇ ಭಾಗಿಯಾಗಿರಲಿ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಕಾಲೇಜು ವಿದ್ಯಾರ್ಥಿಗಳು ಡ್ರಗ್ಸ್ ಸೇವನೆ ಮಾಡುತ್ತಿರುವುದು ಹೆಚ್ಚಾಗುತ್ತಿದ್ದ ಹಿನ್ನೆಲೆಯಲ್ಲಿ ಕಾಲೇಜು ಆಡಳಿತ ಮಂಡಳಿಗೂ ಸೂಚನೆ ನೀಡುತ್ತೇವೆ ಎಂದರು.ಪೊಲೀಸರು, ರಾಜಕಾರಣ ಪ್ರಭಾವ ಇರುವುದು ಸತ್ಯಕ್ಕೆ ದೂರವಾದ ಮಾತು ಎಂದು ಅವರು ತಿಳಿಸಿದರು.ಚಿತ್ರರಂಗದಲ್ಲಿರದ ಹಲವು ಮಂದಿ ಡ್ರಗ್ಸ್ ಪ್ರಭಾವಕ್ಕೆ ಒಳಗಾಗಿದ್ದಾರೆ. ಸದ್ಯಕ್ಕೆ ಅದರ ಮೂಲವನ್ನು ಪತ್ತೆಹಚ್ಚಲಾಗುತ್ತಿದೆ ಎಂದು ಬೊಮ್ಮಾಯಿ ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/03/b-bommai.gif)