ಜೆಇಇ, ನೀಟ್ ಮುಂದೂಡಿಕೆ ಅರ್ಜಿ ವಜಾಗೊಳಿಸಿದ ಸುಪ್ರೀಂ!!

ನವದೆಹಲಿ :

    ಜೆಇಇ – ನೀಟ್ ಪರೀಕ್ಷೆಯನ್ನು ಮುಂದೂಡುವಂತೆ 6 ರಾಜ್ಯಗಳು ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

    ಈ ಹಿಂದೆ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮತ್ತು ಸೆಪ್ಟೆಂಬರ್‌ನಲ್ಲಿ ನಿಗದಿಯಾಗಿದ್ದ ರಾಷ್ಟ್ರೀಯ ಅರ್ಹತೆ ಕಂ ಪ್ರವೇಶ ಪರೀಕ್ಷೆ (ನೀಟ್) ಅನ್ನು ಮುಂದೂಡಬೇಕೆಂಬ ಮನವಿಯನ್ನು ಸುಪ್ರೀಂ ಕೋರ್ಟ್ ಆಗಸ್ಟ್ 17 ರಂದು ವಜಾಗೊಳಿಸಿತ್ತು.  ಆಗಸ್ಟ್ 17 ರಂದು ಜಾರಿಗೆ ಬಂದ ಆದೇಶವನ್ನು ಮರುಪರಿಶೀಲಿಸುವಂತೆ ನ್ಯಾಯಾಲಯವನ್ನು ಕೋರಲಾಗಿತ್ತು.

     ಕೋವಿಡ್ -19 ಸಾಂಕ್ರಾಮಿಕ ರೋಗಕಾರಣದಿಂದ ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ಮುಂದೂಡಬೇಕೆಂದು ಕೋರಿ ಬಿಜೆಪಿ ಸರ್ಕಾರೇತರ ರಾಜ್ಯಗಳಾದ ಪಶ್ಚಿಮ ಬಂಗಾಳ, ರಾಜಸ್ಥಾನ, ಪಂಜಾಬ್, ಮಹಾರಾಷ್ಟ್ರ, ಛತ್ತೀಸ್ ಗಢ ಮತ್ತು ಜಾರ್ಖಂಡ್ ರಾಜ್ಯಗಳು ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದವು.

     ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಬಿ.ಆರ್.ಗವಾಯಿ ಮತ್ತು ಕೃಷ್ಣ ಮುರಾರಿ ಅವರನ್ನೊಳಗೊಂಡ ನ್ಯಾಯಪೀಠವು ಪರಿಶೀಲನಾ ಅರ್ಜಿಯ ವಿಚಾರಣೆ ನಡೆಸಿದೆ. ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಜೆಇಇ ಮತ್ತು ನೀಟ್ ಪರೀಕ್ಷೆಗಳು ನಿಗದಿತ ದಿನಾಂಕದಂದು ನಡೆಯಲಿವೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ