ಚಾಮರಾಜನಗರ ; ಅಪರಿಚಿತ ವಾಹನ ಢಿಕ್ಕಿ ; ಜಿಂಕೆ ಸಾವು!!

ಹನೂರು (ಚಾಮರಾಜನಗರ): 

    ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ಮೃತಪಟ್ಟಿರುವ ಘಟನೆ ಕೊಳ್ಳೇಗಾಲ – ಹಸನೂರು ಘಾಟ್ ಅಂತಾರಾಜ್ಯ ಹೆದ್ದಾರಿಯಲ್ಲಿ ಜರುಗಿದೆ.

     ವೇಗವಾಗಿ ಚಲಿಸುತ್ತಿದ್ದ ಇನ್ನೊವಾ ಕಾರು ಡಿಕ್ಕಿ ಹೊಡೆದಿದೆ, ಇದರ ಪರಿಣಾಮ ಜಿಂಕೆಯು ಸ್ಥಳದಲ್ಲಿಯೇ ರಕ್ತ ಕಾರಿ ಪ್ರಾಣ ಬಿಟ್ಟಿದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.    

     ಇದನ್ನು ಗಮನಿಸಿದ ಕೂಡಲೇ ಸಾರ್ವಜನಿಕರು ಅರಣ್ಯ ಇಲಾಖಾ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಬಿಆರ್ ಟಿ ಹುಲಿ ಸಂರಕ್ಷಿತಾರಣ್ಯ ಪ್ರದೇಶ ಬೈಲೂರು ವಲಯದ ಅರಣ್ಯಾಧಿಕಾರಿಗಳು ಸ್ಥಳಕ್ಕಾಗಮಿಸಿ ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

 

Recent Articles

spot_img

Related Stories

Share via
Copy link