ಬೆಂಗಳೂರು:
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಪೊರೇಟರ್ ಪುತ್ರನೋರ್ವ ಭಾಗಿಯಾಗಿರುವ ಶಂಕೆ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಎನ್ ಸಿಬಿ ಈಗಾಗಲೇ ನೋಟಿಸ್ ನೀಡಿತ್ತು.ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಕಾಂಗ್ರೆಸ್ ಕಾರ್ಪೋರೇಟರ್ ಕೇಶವಮೂರ್ತಿ ಅವರ ಪುತ್ರ ಯಶಸ್ ಅವರಿಗೆ ಎನ್ ಸಿಬಿ ನೋಟಿಸ್ ನೀಡಿತ್ತು. ಆದರೆ, ಇದೂವರೆಗೂ ಯಶಸ್ ವಿಚಾರಣೆಗೆ ಹಾಜರಾಗಿಲ್ಲ.
ಈ ಕುರಿತು ಬೆಂಗಳೂರು ಎನ್ ಸಿಬಿ ಮುಖ್ಯಸ್ಥ ಅಮಿತ್ ಗವಾಟೆ ಪ್ರತಿಕ್ರಿಯಿಸಿ, ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಕಾರ್ಪೋರೇಟರ್ ಕೇಶವಮೂರ್ತಿ ಅವರ ಪುತ್ರ ಯಶಸ್ ಅವರಿಗೆ ಎನ್ ಸಿಬಿಯಿಂದ ನೋಟಿಸ್ ನೀಡಲಾಗಿತ್ತು. ಆದರೆ, ಇದುವರೆಗೂ ಯಶಸ್ ವಿಚಾರಣೆಗೆ ಹಾಜರಾಗಿಲ್ಲ. ಆದ್ದರಿಂದ ಯಶಸ್ ಎಲ್ಲಿದ್ದಾನೆ ಎಂಬುದರ ಬಗ್ಗೆ ಮಾಹಿತಿ ಕಲೆಹಾಕಿ ಅವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ ಸಂಬಂಧ ಡ್ರಗ್ಸ್ ಮಾಫಿಯಾ ನಂಟಿದೆ ಎಂಬುದು ಪತ್ತೆಯಾದ ನಂತರ ನಾರ್ಕೋಟಿಕ್ಸ್ ಕಂಟ್ರೋಲರ್ ಬ್ಯೂರೋ(ಎನ್ಸಿಬಿ) ಅಖಾಡಕ್ಕೆ ಇಳಿದಿತ್ತು. ಮುಂಬೈನ ಡ್ರಗ್ ಪೆಡ್ಲರ್ ಮೊಹಮ್ಮದ್ ಜೊತೆ ಸಂಪರ್ಕ ಹೊಂದಿದ್ದ. ಮೊಹಮ್ಮದ್ ಸುಶಾಂತ್ ಸಿಂಗ್ ಗೆಳತಿ ರಿಯಾ ಚಕ್ರವರ್ತಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ. ಮೊಹಮ್ಮದ್ ನ ವಿಚಾರಣೆ ವೇಳೆ ಯಶಸ್ ಹೆಸರು ಹೇಳಿರುವುದರಿಂದ ಎನ್ ಸಿಬಿ ಯಶಸ್ ಗೆ ನೋಟಿಸ್ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ