ಶ್ರೀನಗರ:
ಸಾಂಬಾದಿಂದ ಶಸ್ತ್ರಾಸ್ತ್ರಗಳನ್ನು ಸಾಗಿಸುತ್ತಿದ್ದ ಇಬ್ಬರು ಉಗ್ರರನ್ನು ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಎಂದು ರಕ್ಷಣಾ ಸಚಿವಾಲಯದ ವಕ್ತಾರರು ಗುರುವಾರ ತಿಳಿಸಿದ್ದಾರೆ.ಪಂಜಾಬ್ನಲ್ಲಿ ಅಗತ್ಯ ವಸ್ತುಗಳನ್ನು ತುಂಬಿಕೊಂಡು ಬರುತ್ತಿದ್ದ ವಾಹನದಲ್ಲಿ ಉಗ್ರರು ಶಸ್ತ್ರಾಸ್ತ್ರ ಸಾಗಿಸಿದ್ದಾರೆ.
ಉಗ್ರರು ಇಡೀ ಪ್ರಯಾಣದ ಸಮಯದಲ್ಲಿ ಪಾಕಿಸ್ತಾನದಲ್ಲಿ ಸಕ್ರಿಯ ಉಗ್ರರೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ . ಜಮ್ಮು ಪ್ರದೇಶದ ಸಾಂಬಾದಿಂದ ಕಾಶ್ಮೀರಕ್ಕೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಸಾಗಿಸುವ ಪಿತೂರಿಯನ್ನು ಉಗ್ರರು ನಡೆಸಿದ್ದರು ಎಂದು ವಕ್ತಾರರು ಹೇಳಿದ್ದಾರೆ