ಭಾರತದ 1,600 ಕ್ಕೂ ಹೆಚ್ಚು ಕಂಪನಿಗಳಲ್ಲಿ ಚೀನಾದಿಂದ ಹೂಡಿಕೆ

ನವದೆಹಲಿ:

     ಭಾರತದ 1,600 ಕ್ಕೂ ಹೆಚ್ಚು ಕಂಪನಿಗಳಿಗೆ ಚೀನಾದಿಂದ 1 ಬಿಲಿಯನ್ ಡಾಲರ್ ಹಣ ಬಂದಿದೆ ಎಂದು ಸರ್ಕಾರದ ಅಧಿಕೃತ ಅಂಕಿ-ಅಂಶಗಳಿಂದ ತಿಳಿದುಬಂದಿದೆ. 2016 ರ ಏಪ್ರಿಲ್ ನಿಂದ ಮಾರ್ಚ್ 2020 ರ ಅವಧಿಯಲ್ಲಿ 46 ಕ್ಷೇತ್ರಗಳಲ್ಲಿನ ವಿವಿಧ ಕಂಪನಿಗಳಿಗೆ, ಪ್ರಮುಖವಾಗಿ ಸ್ಟಾರ್ಟ್ ಅಪ್ ಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟು ಮೊತ್ತ ಚೀನಾದ ವಿದೇಶಿ ನೇರ ಬಂಡವಾಳ ಹೂಡಿಕೆಯ ರೂಪದಲ್ಲಿ ಬಂದಿದೆ ಎಂದು ರಾಜ್ಯಸಭೆಯಲ್ಲಿ ಸರ್ಕಾರ ಲಿಖಿತ ಉತ್ತರ ನೀಡಿದೆ. 

ಆಟೋಮೊಬೈಲ್ ಕ್ಷೇತ್ರ, ಪುಸ್ತಕ ಮುದ್ರಣ, ಎಲೆ ಕ್ಟ್ರಾನಿಕ್ಸ್ , ಸೇವೆಗಳು ಹಾಗೂ ಎಲೆಕ್ಟ್ರಿಕಲ್   ಉಪಕರಣ ಕ್ಷೇತ್ರಗಳಲ್ಲಿ 100 ಮಿಲಿಯನ್ ಡಾಲರ್ ಗೂ ಅಧಿಕ ಎಫ್ ಡಿಐ ಹರಿದುಬಂದಿದೆ. ಈ ಪೈಕಿ ಅತಿ ಹೆಚ್ಚು ಅಂದರೆ 172 ಮಿಲಿಯನ್ ಡಾಲರ್ ಆಟೋಮೊಬೈಲ್ ಕ್ಷೇತ್ರಕ್ಕೆ ಬಂದಿದೆ ಎನ್ನುತ್ತಿದೆ ಸರ್ಕಾರಿ ಅಂಕಿ-ಅಂಶ. ಕಾರ್ಪೊರೇಟ್ ವ್ಯವಹಾರಗಳ ಸಚಿವ ಅನುರಾಗ್ ಸಿಂಗ್ ಠಾಕೂರ್ ರಾಜ್ಯಸಭೆಗೆ ಈ ಬಗ್ಗೆ ಲಿಖಿತ ಉತ್ತರ ನೀಡಿದ್ದಾರೆ. 
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link