ಕೊರೋನಾ ವಾರಿಯರ್ಸ್ ಅನ್ನು ಅಪಮಾನಿಸಬೇಡಿ : ರಾಹುಲ್ ಗಾಂಧಿ

ನವದೆಹಲಿ:

     ಕೊರೋನಾ ನಿರ್ವಹಣೆ ವಿಚಾರವಾಗಿ ಮತ್ತೊಮ್ಮೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೋವಿಡ್ ವಾರಿಯರ್ಸ್ ಗೆ ಅಪಮಾನ ಮಾಡಬೇಡಿ ಎಂದು ಹೇಳಿದ್ದಾರೆ.

     ಈ ಹಿಂದೆ ರಾಜ್ಯಸಭೆಯಲ್ಲಿ ಮಾತನಾಡಿದ್ದ ಕೇಂದ್ರ ಸಚಿವ ಅಶ್ವಿನಿ ಚೌಬೆ ಅವರು, ಆರೋಗ್ಯ ಇಲಾಖೆ ರಾಜ್ಯ ಸರ್ಕಾರಗಳ ವಿಚಾರವಾಗಿದ್ದು, ಕೊರೋನಾ ಸೋಂಕಿನಿಂದ ಮೃತಪಟ್ಟ ಆರೋಗ್ಯ ಸಿಬ್ಬಂದಿಗಳ ದತ್ತಾಂಶವನ್ನು ಕೇಂದ್ರೀಯವಾಗಿ ನಿರ್ವಹಣೆ ಮಾಡಿಲ್ಲ. ಅಂತಹ ಯಾವುದೇ ದತ್ತಾಂಶ ಕೇಂದ್ರ ಸರ್ಕಾರದ ಬಳಿ ಇಲ್ಲ. ಕೋವಿಡ್ ಸಾಂಕ್ರಾಮಿಕದಲ್ಲಿ ಕರ್ತವ್ಯದಲ್ಲಿ ಪಾಲ್ಗೊಂಡು ಸೋಂಕಿಗೆ ತುತ್ತಾಗಿ ಸಾವಿಗೀಡಾರುವ ವೈದ್ಯರು, ದಾದಿಯರು, ಸಹಾಯಕ ಸಿಬ್ಬಂದಿ ಮತ್ತು ಆಶಾ ಕಾರ್ಮಿಕರು ಸೇರಿದಂತೆ ಆರೋಗ್ಯ ಸಿಬ್ಬಂದಿಗಳ ದತ್ತಾಂಶ ತಮ್ಮ ಬಳಿ ಇಲ್ಲ ಎಂದು ಹೇಳಿದ್ದರು.

    ಇದೀಗ ಕೇಂದ್ರ ಸಚಿವರ ಈ ಹೇಳಿಕೆಗೆ ವಿರೋಧ ಪಕ್ಷಗಳು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದು, ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಅವರು, ಕೋವಿಡ್ ಸಾಂಕ್ರಾಮಿಕದ ವಿರುದ್ಧ ಪ್ರಾಣದ ಹಂಗು ತೊರೆದು ಹೋರಾಡುತ್ತಿರುವ ವಾರಿಯರ್ಸ್ ಕುರಿತ ಭದ್ರತೆ ಮತ್ತು ಗೌರವ ಸರ್ಕಾರದ ಕರ್ತವ್ಯವಾಗಿರುತ್ತದೆ. ತಟ್ಟೆ ಬಡಿದು, ದೀಪ ಬೆಳಗಿದರೆ ಕೊರೋನಾ ಸೋಲಿಸಲು ಸಾಧ್ಯವಿಲ್ಲ. ಕೋವಿಡ್ ವಿರುದ್ಧ ಹೋರಾಡುತ್ತಿರುವ ಕೊರೋನಾ ವಾರಿಯರ್ಸ್ ಗಳನ್ನು ಗೌರವಿಸಬೇಕು. ಮೋದಿ ಸರ್ಕಾರ ಕೊರೋನಾ ವಾರಿಯರ್ಸ್ ಗಳನ್ನು ಅವಮಾನಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link