ಬೆಂಗಳೂರು :
ಸಮಿಶ್ರ ಸರ್ಕಾರ ಪತನಕ್ಕೆ ಕಾರಣೀಭೂತರಾದ ಆಗಿನ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ ಅವರನ್ನು ಉಪಚುನಾವಣೆಯಲ್ಲಿ ಸೋಲಿಸಿ ಗೆಲುವಿನ ನಗೆ ಬೀರಿದ್ದ ಪಕ್ಷೇತರ ಅಭ್ಯರ್ಥಿ ಶಾಸಕ ಶರತ್ ಬಚ್ಚೇಗೌಡ, ಮುಂದಿನವಾರ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ.
ಬಿಜೆಪಿಯಿಂದ ಟಿಕೆಟ್ ಸಿಗದಿದ್ದರಿಂದ, ಹೊಸಕೋಟೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಬಿಎನ್ ಬಚ್ಚೇಗೌಡ ಅವರ ಪುತ್ರ, ಶರತ್ ಬಚ್ಚೇಗೌಡ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು. ಬಿಜೆಪಿಯಿಂದ ಎಂ.ಟಿ.ಬಿ.ನಾಗರಾಜ್ ಅವರು ಸ್ಪರ್ಧಿಯಾಗಿದ್ದರು. ಇಂತಹ ಪೈಪೋಟಿಯ ಚುನಾವಣಾ ಕದನದಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಗೆಲುವು ಸಾಧಿಸಿದ್ದರು.
ಇದೀಗ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದಿದ್ದಂತ ಶರತ್ ಬಚ್ಚೇಗೌಡ, ಕಾಂಗ್ರೆಸ್ ಪಕ್ಷಕ್ಕೆ ಮುಂದಿನವಾರ ಸೇರ್ಪಡೆಗೊಳ್ಳಲಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಲಿದ್ದಾರೆ. ಸಮಯ, ದಿನಾಂಕ ನಿಗಧಿಯೊಂದೇ ಬಾಕಿ ಇದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
