ಬೆಂಗಳೂರು :
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕರಿಗೆ ಶಾಕ್ ಕೊಟ್ಟಿದ್ದಂತ ಕೊರೋನಾ, ಇದೀಗ ಡಿಸಿಎಂ ಡಾ.ಸಿಎನ್ ಅಶ್ವತ್ಥ್ ನಾರಾಯಣ್ ಗೂ ಶಾಕ್ ನೀಡಿದೆ. ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಈ ಕುರಿತಂತೆ ಟ್ವಿಟ್ ಮಾಡಿರುವ ಅವರು, ಸೆಪ್ಟೆಂಬರ್ 21ರಿಂದ ಆರಂಭವಾಗಲಿರುವ ವಿಧಾನಮಂಡಲದ ಅಧಿವೇಶನದಲ್ಲಿ ಭಾಗವಹಿಸುವಂತ ಸಲುವಾಗಿ ಕೊರೋನಾ ಪರೀಕ್ಷೆಗೆ ಒಳಗಾಗಿದ್ದೆ. ಅದರ ವರದಿ ಬಂದಿದ್ದು, ತಮಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ತಮ್ಮ ಸಂಪರ್ಕದಲ್ಲಿರುವರು ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ