ಬೆಂಗಳೂರು :
ಜೆಡಿಎಸ್ ಮುಖಂಡರಾಗಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಅವರು ತಮ್ಮ ಅನೇಕ ಬೆಂಬಲಿಗರ ಜತೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಅಧಿಕೃತವಾಗಿ ಕಾಂಗ್ರೆಸ್ಸಿಗೆ ಸೇರ್ಪಡೆಗೊಂಡಿದ್ದಾರೆ.ಕೆಪಿಸಿಸಿ ಕಚೇರಿಯಲ್ಲಿ ನಡೆದಂತ ಸರಳ ಸಮಾರಂಭದಲ್ಲಿ, ಇಂದು ಮಾಜಿ ವಿಧಾನಪರಿಷತ್ ಸದಸ್ಯ ರಮೇಶ್ ಬಾಬು ಅವರು, ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆ ಗೊಂಡಿದ್ದಾರೆ.ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಶಾಲು ಧರಿಸುವ ಮೂಲಕ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
