ನವದೆಹಲಿ:
ಸಂಸತ್‌ನಲ್ಲಿ ಕೃಷಿ ಮಸೂದೆಗಳ ಅಂಗೀಕಾರಕ್ಕೆ ಸಂಬಂಧಿಸಿ ಶಿರೋಮಣಿ ಅಕಾಲಿ ದಳದ (ಎಸ್‌ಎಡಿ) ಸಂಸದ ಸುಖ್‌ಬೀರ್ ಸಿಂಗ್ ಬಾದಲ್ ನೇತೃತ್ವದ ನಿಯೋಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಇಂದು ಸಂಜೆ 4.30ಕ್ಕೆ ಭೇಟಿಯಾಗಲಿದೆ.ಕೃಷಿ ಮಸೂದೆಗಳಿಗೆ ಅಕಾಲಿ ದಳ ಹಿಂದಿನಿಂದಲೂ ತೀವ್ರ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದೆ. ಪಂಜಾಬ್‌ನಲ್ಲಿ ಪಕ್ಷದ ನೇತೃತ್ವದಲ್ಲಿ ಪ್ರತಿಭಟನೆಗಳೂ ನಡೆದಿವೆ.ರೈತರ ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಮಸೂದೆ ಮತ್ತು ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕುರಿತಂತೆ ರೈತರ ಜತೆ (ಸಬಲೀಕರಣ ಮತ್ತು ರಕ್ಷಣೆ) ಒಪ್ಪಂದ ಮಸೂದೆಗಳಿಗೆ ಭಾರಿ ಗದ್ದಲ, ಪ್ರತಿಭಟನೆ ಮತ್ತು ವಿರೋಧದ ನಡುವೆಯೇ ಭಾನುವಾರ ರಾಜ್ಯಸಭೆಯಲ್ಲಿ ಅನುಮೋದನೆ ಪಡೆಯಲಾಗಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
