ನವದೆಹಲಿ:
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1.01 ಲಕ್ಷ ಸೋಂಕಿತರು ಗುಣಮುಖರಾಗಿದ್ದು, ಈ ಮೂಲಕ ದೇಶಾದ್ಯಂತ ದಾಖಲೆ ಪ್ರಮಾಣದ ಸೋಂಕಿತರು ಗುಣಮುಖರಾಗಿದ್ದಾರೆ ಎನ್ನಲಾಗಿದೆ.
ಹೌದು.. ಈ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 1,01,468 ಮಂದಿ ಸೋಂಕಿತರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದು ದೇಶದಲ್ಲೇ ಒಂದು ದಿನದ ಗರಿಷ್ಠ ಗುಣಮುಖ ಸಂಖ್ಯೆಯಾಗಿದೆ. ಆ ಮೂಲಕ ದೇಶದಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 44,97,867ಕ್ಕೆ ಏರಿಕೆಯಾಗಿದೆ.
ನಿನ್ನೆ ಒಂದೇ ದಿನ 75,083 ಹೊಸ ಪ್ರಕರಣಗಳು ದಾಖಲಾಗುವುದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆಯು 55 ಲಕ್ಷ ಗಡಿ ದಾಟಿದೆ. 1,053 ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 88,935ಕ್ಕೆ ಏರಿಕೆಯಾಗಿದೆ.
ಪ್ರಸ್ತುತ ದೇಶದಲ್ಲಿ ಒಟ್ಟು 9,75,861 ಸಕ್ರಿಯ ಪ್ರಕರಣಗಳಿವೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
