ನವದೆಹಲಿ:
ಪ್ರತಿಪಕ್ಷಗಳ ಕಲಾಪ ಬಹಿಷ್ಕರಿಸಿದ್ದನ್ನೇ ಬಂಡವಾಳ ಮಾಡಿಕೊಂಡ ಕೇಂದ್ರ ಸರ್ಕಾರ ಮಂಗಳವಾರ ಮೂರು ಗಂಟೆಯಲ್ಲೇ ದಾಖಲೆಯ ಬರೋಬ್ಬರಿ ಏಳು ಮಂಸೂದೆಗಳನ್ನು ರಾಜ್ಯಸಭೆಯಲ್ಲಿ ಅಂಗೀಕರಿಸಿದೆ.
ಕೃಷಿ ಮಸೂದೆ ವಿಚಾರವಾಗಿ ರಾಜ್ಯಸಭೆಯಲ್ಲಿ ಉಂಟಾದ ಕೋಲಾಹಲಕ್ಕೆ ಸಂಬಂಧಿಸಿದಂತೆ ರಾಜ್ಯಸಭೆ ಅಧ್ಯಕ್ಷ ವೆಂಕಯ್ಯ ನಾಯ್ಡು ಅವರು ಪ್ರತಿಪಕ್ಷಗಳ ಎಂಟು ಸದಸ್ಯರನ್ನು ಅಮಾನತು ಮಾಡಿದ್ದಾರೆ. ಈ ನಿರ್ಧಾರ ಖಂಡಿಸಿ ಅಮಾನತುಗೊಂಡ ಸದಸ್ಯರು ಆಹೋರಾತ್ರಿ ಧರಣಿ ನಡೆಸಿದ್ದರು. ಈಗ ತಮ್ಮ ಧರಣಿ ಅಂತ್ಯಗೊಳಿಸಿದ್ದು, ವಿಪಕ್ಷ ನಾಯಕರು ಆರಂಭಿಸಿರುವ ಅಧಿವೇಶನ ಬಹಿಷ್ಕಾರ ಪ್ರತಿಭಟನೆಗೆ ಕೈ ಜೋಡಿಸಿದ್ದಾರೆ.
