ಚಿತ್ರದುರ್ಗ
ರಾಜ್ಯ ಸರ್ಕಾರ ಎ.ಪಿ.ಎಂ.ಸಿ ತಿದ್ದುಪಡಿ ಕಾಯ್ದೆಯನ್ನು ಮಂಡನೆ ಮಾಡಿದ್ದು ಕಾಯ್ದೆಯನ್ನು ವಾಪಸ್ ಪಡೆಯಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಬಂದು ಪ್ರತಿಭಟನೆ ಮಾಡಿದರೂ ಸಹ ಎ.ಪಿ.ಎಂ.ಸಿ ಕಾಯ್ದೆಯನ್ನು ತಿದ್ದುಪಡಿ ಮಾಡಿದ್ದು ಖಂಡನೀಯ ಮತ್ತು ಅಹೋರಾತ್ರಿ ಧರಣಿ ಮಾಡುತ್ತಿರುವ ರಾಜ್ಯ ಪದಾಧಿಕಾರಿಗಳನ್ನು ರೈತ ಮುಖಂಡರನ್ನು ಖಂಡಿಸಿದ್ದನ್ನು ಚಿತ್ರದುರ್ಗ ಜಿಲ್ಲಾ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾಧಿಕಾರಿಗಳ ಕಚೇರಿ ವೃತ್ತದ ಬಳಿ ತೀವ್ರವಾಗಿ ಖಂಡಿಸಿದೆ.
ಸೆ.28 ಬಂದ್ ಗೆ ಕರೆ ನೀಡುವ ಬಗ್ಗೆ ಚರ್ಚೆ ನಡೆಯುತ್ತಿತ್ತು. ನಮ್ಮ ಒತ್ತಾಯಕ್ಕೆ ಮಣಿದು ಮಸೂದೆಯನ್ನ ತಡೆ ಹಿಡಿಯಬಹುದು ಎಂಬ ವಿಶ್ವಾಸವಿತ್ತು. ಆದರೆ ಸರ್ಕಾರದ್ದು ಮೊಸಳೆ ಕಣ್ಣೀರು ಎಂಬುವುದು ಖಚಿತವಾಗಿದೆ. ಬೀದಿಯಲ್ಲಿ ನಾವು ಪ್ರತಿಭಟನೆ ಮಾಡುತ್ತಿದ್ದರೂ ನಮ್ಮನ್ನು ಮಾತನಾಡಿಸಲು ಸರ್ಕಾರ ಮುಂದಾಗಿಲ್ಲ ಇದೊಂದು ಕಾರ್ಪೋರೇಟ್ ಸರ್ಕಾರವಾಗಿದ್ದು, ಮಸೂದೆ ಬಗ್ಗೆ ರೈತರ ಸಲಹೆ ಸಹ ಪಡೆದುಕೊಂಡಿಲ್ಲ. ಎಪಿಎಂಸಿ ಮಸೂದೆ ರೈತರ ಮರಣ ಶಾಸನವಾಗಿದೆ. ಬಂಡವಾಳ ಶಾಹಿ ಸರ್ಕಾರ ಇದಾಗಿದೆ. ರೈತರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಿಎಂ ಯಡಿಯೂರಪ್ಪನವರ ಮುಖವಾಡ ಬಯಲಾಗಿದೆ ಎಂದು ಕಿಡಿಕಾರಿದರು.
ಈ ಸಂದರ್ಭದಲ್ಲಿ ಜಿ.ಕೆ.ನಾಗರಾಜ್ ಜಿಲ್ಲಾಧ್ಯಕ್ಷರು, ಶ್ರೀಕಂಠಮೂರ್ತಿ ಚಳ್ಳಕೆರೆ ತಾಲ್ಲೂಕು ಅಧ್ಯಕ್ಷರು, ಮಲ್ಲಿಕಾರ್ಜುನ ಜಿಲ್ಲಾ ಕಾರ್ಯದರ್ಶಿ, ರೆಡ್ಡಿಹಳ್ಳಿ ವೀರಣ್ಣ ರಾಜ್ಯ ಉಪಾಧ್ಯಕ್ಷರು, ಕರಿಸಿದ್ದಯ್ಯ ಜಿಲ್ಲಾ ಸಲಹ ಸಮಿತಿ ಸದಸ್ಯರು, ಎನ್.ಕೆ.ರಾಜಶೇಖರ್ ತಾಲ್ಲೂಕು ಗೌರವಾಧ್ಯಕ್ಷರು, ಎಂ.ಬಸವರಾಜಪ್ಪ ಕಾರ್ಯಾಧ್ಯಕ್ಷರು ಹೊಳಲ್ಕೆರೆ, ವಡೆಯರಹಳ್ಳಿ ಬಸವರಾಜ್ ಇನ್ನು ಮುಂತಾದವರು ಉಪಸ್ಥಿತರರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








