ಚಿಕ್ಕಮಗಳೂರು:

ಮನೆಯಲ್ಲಿಯೇ ಗಾಂಜಾ ದಾಸ್ತಾನು ಮಾಡಿದ್ದ ಆರೋಪದಲ್ಲಿ ತಂದೆ-ಮಗಳನ್ನು ಕಡೂರು ಪೊಲೀಸರು ಬಂಧಿಸಿದ್ದಾರೆ.
ಕಡೂರು ಪಟ್ಟಣದ ಈದ್ಗಾ ನಗರ ನಿವಾಸಿಗಳಾದ ವಿಜಯಮ್ಮ(40) ಅವರ ತಂದೆ ಜಯಣ್ಣ (65) ಬಂಧಿತ ಆರೋಪಿಗಳು.
ಗಾಂಜಾ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಪಿಎಸ್ಐ ವಿಶ್ವನಾಥ್ ನೇತೃತ್ವದಲ್ಲಿ ದಾಳಿ ಮಾಡಿದಾಗ ಆರೋಪಿಗಳು ಮಾಲು ಸಹಿತ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳಿಂದ 960 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








