ಜೆಡಿಯು ಸೇರ್ಪಡೆಯಾದ ನಿವೃತ್ತ ಡಿಜಿಪಿ..!

ಪಟ್ನಾ:

    ಮುಂದಿನ ತಿಂಗಳು ಬಿಹಾರ ಚುನಾವಣೆ ನಡೆಯಲಿದ್ದು ಇತ್ತೀಚೆಗಷ್ಟೇ ಸ್ವಯಂ ನಿವೃತ್ತಿ ಪಡೆದಿದ್ದ ಬಿಹಾರ ಡಿಜಿಪಿ ಗುಪ್ತೇಶ್ವರ ಪಾಂಡೆ ಅವರು ಜೆಡಿಯು ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. 

     ನಿವೃತ್ತಿಗೆ ಕೆಲ ದಿನಗಳ ಇರುವಂತೆ ಗುಪ್ತೇಶ್ವರ ಪಾಂಡೆ ಅವರು ವಿಆರ್ ಎಸ್ ಪಡೆದುಕೊಂಡಿದ್ದರು. ಬಳಿಕ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಆದರೆ ರಾಜಕೀಯ ಎಂಟ್ರಿ ಕುರಿತು ಯಾವುದೇ ಸೂಚನೆ ನೀಡಿರಲಿಲ್ಲ. ಆದರೆ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಬಿಹಾರ ಜೆಡಿಯು ಅಧ್ಯಕ್ಷರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ನಟ ಸುಶಾಂತ್ ಸಿಂಗ್ ರಜಪೂತ್ ನಿಗೂಢ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸುವ ವಿಷಯದ ಬಗ್ಗೆ 1987ರ ಬ್ಯಾಚ್ ಐಪಿಎಸ್ ಅಧಿಕಾರಿ ಕುಮಾರ್ ಅವರನ್ನು ಬಲವಾಗಿ ಸಮರ್ಥಿಸಿಕೊಂಡಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link