ಬೆಂಗಳೂರು:
ಮಹಾರಾಷ್ಟ್ರ ರಾಜ್ಯದ ಉಸ್ತುವಾರಿಯಾಗಿ ಇತ್ತೀಚೆಗೆ ನೇಮಕಗೊಂಡಿರುವ ಮಾಜಿ ಸಚಿವ ಹೆಚ್.ಕೆ.ಪಾಟೀಲ್ಗೆ ಕೊರೊನಾ ಪಾಸಿಟಿವ್ ಬಂದಿದೆ.
ಹೆಚ್.ಕೆ.ಪಾಟೀಲ್ ಕೊರೊನಾ ತಪಾಸಣೆಗೆ ಒಳಗಾಗಿದ್ದು ಪಾಸಿಟಿವ್ ಬಂದಿದೆ. ಈ ಹಿನ್ನೆಲೆ ಮುಂದಿನ 10 ದಿನಗಳ ಕಾಲ ತಾವು ಮನೆಯಲ್ಲೇ ಕ್ವಾರಂಟೈನ್ ಆಗುವುದಾಗಿ ತಿಳಿಸಿದ್ದಾರೆ.
I have been tested positive for #Covid19. I am asymptomatic but quarantined myself for 10 days. I would be perfectly alright soon with your wishes.I request to all those who had come in contact with me in the last couple of days to get themselves tested as a precaution.Stay safe!
— HK Patil (@HKPatil1953) September 28, 2020
ರೋಗದ ಯಾವುದೇ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಆದರೂ ಸುರಕ್ಷತೆಯ ದೃಷ್ಟಿಯಿಂದ ಮನೆಯಲ್ಲೇ ಉಳಿದುಕೊಳ್ಳುತ್ತೇನೆ. ಆದಷ್ಟು ಶೀಘ್ರ ಗುಣಮುಖನಾಗಿ ಸೇವೆಗೆ ಹಿಂದಿರುಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಅವರು, ಕಳೆದ ಎರಡು ದಿನಗಳಿಂದ ತಮ್ಮ ಸಂಪರ್ಕಕ್ಕೆ ಬಂದವರು ಸ್ವಯಂ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ.
ಎರಡು ದಿನಗಳ ಹಿಂದಷ್ಟೇ ಮಹಾರಾಷ್ಟ್ರಕ್ಕೆ ತೆರಳಿದ್ದ ಅವರು, ಅಲ್ಲಿನ ಹಲವು ನಾಯಕರನ್ನು ಭೇಟಿ ಮಾಡಿ ಹಿಂದಿರುಗಿದ್ದರು. ಮಹಾರಾಷ್ಟ್ರದಲ್ಲಿ ಹಲವು ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿ ಪಕ್ಷ ಸಂಘಟನೆ ಬಗ್ಗೆ ಚರ್ಚಿಸಿದ್ದರು. ಆದ್ರೆ ಅಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಅತಿ ಹೆಚ್ಚು ಇದ್ದು, ಈ ಪ್ರವಾಸದ ಸಂದರ್ಭದಲ್ಲಿ ಅವರಿಗೆ ಕೋವಿಡ್-19 ಸೋಂಕು ತಗುಲಿದೆ ಎಂದು ಹೇಳಲಾಗುತ್ತಿದೆ.
