ಬೆಂಗಳೂರು:
ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆ ಸರ್ಕಾರದ ಮುಂದಿಲ್ಲ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
We haven't taken any decision yet, regarding reopening of schools in state. Govt don't have any such plans at present. We're taking opinions of Legislators, MPs & concerned people. We'll also discuss with education experts & institutions: Karnataka Education Minister (File photo) pic.twitter.com/Y59NbNDUIL
— ANI (@ANI) September 29, 2020
ಅಕ್ಟೋಬರ್ನಲ್ಲಿ ಶಾಲೆ-ಕಾಲೇಜು ಆರಂಭವಾಗುತ್ತಾ? ಅನ್ನೋ ಪ್ರಶ್ನೆಗೆ ಇದೀಗ ಶಿಕ್ಷಣ ಸಚಿವರೇ ಸ್ಪಷ್ಟನೆ ನೀಡಿದ್ದಾರೆ.
ಶಾಲೆ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭಿಸುವ ಯೋಚನೆಯು ಕೂಡ ಸರ್ಕಾರದ ಮುಂದೆ ಇಲ್ಲ. ಈ ಕುರಿತು ಶಾಸಕರ ಮತ್ತು ಸಂಸದರ ಹಾಗೂ ಇತರೆ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಆಹ್ವಾನಿಸುತ್ತಿದ್ದೇನೆ. ಇದರ ಬಗ್ಗೆ ಸಾಕಷ್ಟು ಚರ್ಚೆ, ಅಭಿಪ್ರಾಯ ಸಂಗ್ರಹ, ಪೋಷಕರ ಸಲಹೆ ಎಲ್ಲವನ್ನು ಪಡೆಯಬೇಕಿದೆ. ಅಲ್ಲಿಯವರೆಗೆ ರಾಜ್ಯದ ಶಾಲೆ-ಕಾಲೇಜು ಪ್ರಾರಂಭಿಸುವ ದಿನಾಂಕದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸಚಿವ ಸುರೇಶ್ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/09/Suresh-kumar-s.jpg)