ಬೆಂಗಳೂರು:
ಕರ್ನಾಟಕ ಸರ್ಕಾರ ಸೋಮವಾರ ಪ್ರಮುಖ ಹುದ್ದೆಗಳಲ್ಲಿದ್ದ ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.ಬಿಬಿಎಂಪಿ ವಿಶೇಷ ಆಯುಕ್ತರಾಗಿದ್ದ ಪಿ ರಾಜೇಂದ್ರ ಚೋಳನ್ ಅವರನ್ನು ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಎಂಡಿ ಯನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.
ಜೆ. ಮಂಜುನಾಥ್-ಬಿಬಿಎಂಪಿ ವಿಶೇಷ ಆಯುಕ್ತ, ಹೆಪ್ಸಿಬಾ ರಾಣಿ ಕೊರ್ಲಪಾಟಿ-ಬಿಬಿಎಂಪಿ ವಿಶೇಷ ಆಯುಕ್ತರು(ಎಸ್ಟೇಟ್) ಹಾಗೂ ಪಿ. ಶಿವಶಂಕರ್ ಅವರನ್ನು ಚಿಕ್ಕಬಳ್ಳಾಪುರ ಜಿ.ಪಂ. ಸಿಇಒ ಆಗಿ ಸರ್ಕಾರ ವರ್ಗಾವಣೆ ಮಾಡಿದೆ.ಕರ್ನಾಟಕ ರೇಷ್ಮೆ ಮಾರುಕಟ್ಟೆ ಬೋರ್ಡ್ ಲಿಮೆಟೆಡ್ ನಿರ್ದೇಶಕರಾಗಿದ್ದ ಎಂ.ಆರ್ ರವಿ ಕುಮಾರ್ ಅವರನ್ನು ಕೋಲಾರ ಜಿಲ್ಲಾ ಪಂಚಾಯಿತಿ ಸಿಇಒ ಯನ್ನಾಗಿ ನೇಮಿಸಲಾಗಿದೆ.