ವಾಷಿಂಗ್ಟನ್ :
ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅವರ ಪತ್ನಿ ಮೆಲಾನಿಯಾಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
Tonight, @FLOTUS and I tested positive for COVID-19. We will begin our quarantine and recovery process immediately. We will get through this TOGETHER!
— Donald J. Trump (@realDonaldTrump) October 2, 2020
ಈ ಕುರಿತು ಟ್ವೀಟ್ ಮಾಡಿರುವ ಡೊನಾಲ್ಡ್ ಟ್ರಂಪ್, ನನಗೆ ಹಾಗೂ ಮೆಲಾನಿಯಾಗೆ ಕೊರೊನಾ ವೈರಸ್ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ. ನಾವು ಕೂಡಲೇ ಕ್ವಾರಂಟೈನ್ ಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದೇವೆ. ನಾವಿಬ್ಬರು ಒಟ್ಟಾಗಿ ಇದರಿಂದ ಹೊರಬರಲಿದ್ದೇವೆ ಎಂದು ಹೇಳಿದ್ದಾರೆ.
ಈ ಹಿಂದೆ ಟ್ರಂಪ್ ಅವರ ಉನ್ನತ ಸಲಹೆಗಾರರಾದ ಹೋಪ್ ಹಿಕ್ಸ್ ಅವರಿಗೆ ಕೋವಿಡ್-19 ದೃಢಪಟ್ಟಿದ್ದು, ರೋಗಲಕ್ಷಣಗಳು ಕಾಣಿಸಿಕೊಂಡಿವೆ ಎಂದು ಅವರ ಆಪ್ತ ಮೂಲವು ಗುರುವಾರ ತಿಳಿಸಿತ್ತು.
ತಮ್ಮ ಆಪ್ತ ಸಲಹೆಗಾರರೊಬ್ಬರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದರಿಂದಾಗಿ ತಾನು ಕ್ವಾರಂಟೈನ್ ಆಗುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದರು. ನಂತರ ಡೊನಾಲ್ಡ್ ಟ್ರಂಪ್ ಮತ್ತು ಮೆಲಾನಿಯಾ ಟ್ರಂಪ್ ಅವರ ಗಂಟಲು ದ್ರವದ ಮಾದರಿ ಪರೀಕ್ಷೆ ನಡೆಸಲಾಗಿದ್ದು ಕೋವಿಡ್-19 ಪಾಸಿಟಿವ್ ವರದಿ ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ