ಕಲ್ಲಿದ್ದಲು ಹಗರಣ : ಮಾಜಿ ಕೇಂದ್ರ ಸಚಿವ ಅಪರಾಧಿ ಎಂದ ಕೋರ್ಟ್

ರಾಂಚಿ:

    1999 ರಲ್ಲಿ ಜಾರ್ಖಂಡ್ ಕಲ್ಲಿದ್ದಲು ಬ್ಲಾಕ್ ಹಂಚಿಕೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ದಿಲೀಪ್ ರೇ ಅವರನ್ನು ಮಂಗಳವಾರ ವಿಶೇಷ ನ್ಯಾಯಾಲಯವು ಅಪರಾಧಿ ಎಂದು ಘೋಷಿಸಿದೆ.

    ವಿಶೇಷ ನ್ಯಾಯಾಧೀಶ ಭರತ್ ಪರಾಶರ್ ಈ ತೀರ್ಪಿತ್ತಿದ್ದಾರೆ. ರೇ ಅವರು ಅಟಲ್ ಬಿಹಾರಿ ವಾಜಪೇಯಿಯವರ ಸರ್ಕಾರದಲ್ಲಿ ರೇ ರಾಜ್ಯ ಸಚಿವ (ಕಲ್ಲಿದ್ದಲು) ಆಗಿ ಸೇವೆ ಸಲ್ಲಿದ್ದರು.ಆ ಸಮಯದಲ್ಲಿ ಕಲ್ಲಿದ್ದಲು ಸಚಿವಾಲಯದ ಇಬ್ಬರು ಹಿರಿಯ ಅಧಿಕಾರಿಗಳಾದ ಪ್ರದೀಪ್ ಕುಮಾರ್ ಬ್ಯಾನರ್ಜಿ ಮತ್ತು ನಿತ್ಯಾನಂದ್ ಗೌತಮ್, ಕ್ಯಾಸ್ಟ್ರಾನ್ ಟೆಕ್ನಾಲಜೀಸ್ ಲಿಮಿಟೆಡ್ (ಸಿಟಿಎಲ್), ಅದರ ನಿರ್ದೇಶಕ ಮಹೇಂದ್ರ ಕುಮಾರ್ ಅಗರ್ವಾಲ್  ಮತ್ತು ಕ್ಯಾಸ್ಟ್ರಾನ್ ಮೈನಿಂಗ್ ಲಿಮಿಟೆಡ್ (ಸಿಎಮ್ಎಲ್) ಗೆ ಸಹ ನ್ಯಾಯಾಲಯ ಅಪರಾಧಿ ಎಂದು ಘೋಷಿಸಿದೆ.

    ಅಕ್ಟೋಬರ್ 14 ರಂದು ನ್ಯಾಯಾಲಯವು ಶಿಕ್ಷೆಯ ಪ್ರಮಾಣವನ್ನು ಘೋಷಿಸಲಿದೆ.ಈ ಪ್ರಕರಣವು ಜಾರ್ಖಂಡ್‌ನ ಗಿರಿದಿಹ್ ‌ನಲ್ಲಿರುವ ಬ್ರಹ್ಮದಿಹಾ ಕಲ್ಲಿದ್ದಲು ಬ್ಲಾಕ್ ಅನ್ನು 1999 ರಲ್ಲಿ ಸಿಟಿಎಲ್‌ಗೆ ಹಂಚಿಕೆ ಮಾಡಿದ್ದರ ಬಗೆಗೆ ಸಂಬಂಧ ಹೊಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap