ಬೆಂಗಳೂರು:
ಕೊರೋನಾ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳ ಸ್ಟಾರ್ ಪ್ರಚಾರಕರ ಸಂಖ್ಯೆಯನ್ನು ಭಾರತ ಚುನಾವಣಾ ಆಯೋಗವು ಮಿತಿಗೊಳಿಸಿ ಆದೇಶ ಹೊರಡಿಸಿದೆ. ಆರ್.ಆರ್ ನಗರ ಹಾಗೂ ಶಿರಾ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈ ಆದೇಶ ನೀಡಿದೆ.
ಈ ಹಿಂದೆ ಭಾರತ ಚುನಾವಣಾ ಆಯೋಗವು ಮಾನ್ಯತೆ ಪಡೆದ ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಪಕ್ಷಗಳಿಗೆ 40 ಸ್ಟಾರ್ ಪ್ರಚಾರಕರನ್ನು ಬಳಸಿಕೊಳ್ಳುವ ಅವಕಾಶ ನೀಡಿತ್ತು. . ಆದರೆ, ಈ ಸಂಖ್ಯೆಯಲ್ಲಿ ಬದಲಾವಣೆ ಮಾಡಿ 30 ಸ್ಟಾರ್ ಪ್ರಚಾರಕರನ್ನು ಬಳಸಿಕೊಳ್ಳಲು ಅವಕಾಶ ನೀಡಿದೆ.
ಅದೇ ರೀತಿಯಲ್ಲಿ ನೊಂದಾಯಿತ ರಾಜಕೀಯ ಪಕ್ಷಗಳಿಗೆ ನೀಡಲಾಗಿದ್ದ 20 ಸ್ಟಾರ್ ಪ್ರಚಾರಕರ ಸಂಖ್ಯೆಯನ್ನು 15ಕ್ಕೆ ಇಳಿಸಿ ಪರಿಷ್ಕತ ಆದೇಶವನ್ನು ನೀಡಿದೆ.ಸ್ಟಾರ್ ಪ್ರಚಾರಕರ ಸಭೆಗಳಿಗೆ ಕನಿಷ್ಠ 48 ಗಂಟೆಗಳ ಮುಂಚೆ ಅನುಮತಿಗಾಗಿ ರಾಜಕೀಯ ಪಕ್ಷಗಳು ಅರ್ಜಿ ಸಲ್ಲಿಸಬೇಕು ಎಂದು ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ