ಬೆಂಗಳೂರು:
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಶಾಲೆಗಳನ್ನು ಆರಂಭ ಮಾಡುವ ಮೂಲಕ ಮಕ್ಕಳ ಜೀವದ ಜೊತೆ ಚೆಲ್ಲಾಟವಾಡಬಾರದು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕೊರೊನಾ ಸೋಂಕು ಹೆಚ್ಚುತ್ತಿರುವುದರಿಂದ ಪೋಷಕರಲ್ಲಿ ಆತಂಕವಿದೆ. ಈ ಪರಿಸ್ಥಿತಿಯಲ್ಲಿ ಶಾಲೆಗಳನ್ನು ಆರಂಭಿಸುವುದು ಸೂಕ್ತವಲ್ಲ. ಸದ್ಯಕ್ಕೆ ಈ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು ಎಂದರು.ಇನ್ನು ಆರ್. ಆರ್. ನಗರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಮಾತನಾಡಿದ ಅವರು, ಮೂವರ ಹೆಸರು ಚರ್ಚೆಯಲ್ಲಿದೆ. ಒಬ್ಬರನ್ನು ಶೀಘ್ರದಲ್ಲಿ ಆಯ್ಕೆ ಮಾಡಲಾಗುತ್ತದೆ. ಆರ್. ಆರ್. ನಗರದಲ್ಲಿ ನಮ್ಮ ಪಕ್ಷಕ್ಕೆ ಬೆಂಬಲವಿದೆ. ಒಳ ಒಪ್ಪಂದ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದರು.ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರ ತಂದೆ ಹನುಮಂತರಾಯಪ್ಪ ಮೂಲತಃ ಜೆಡಿಎಸ್ ನವರಲ್ಲ. ಹಿಂದೆ ಕಾಂಗ್ರೆಸ್ ನಲ್ಲಿಯೇ ಇದ್ದರು. ನಂತರ ನಮ್ಮ ಪಕ್ಷಕ್ಕೆ ಬಂದಿದ್ದರು. ಈಗ ಡಿ.ಕೆ ಶಿವಕುಮಾರ್ ಜೊತೆ ಚೆನ್ನಾಗಿ ಇದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಸೇರುವುದಾಗಿ ಹೇಳಿದ್ದರು. ಅದಕ್ಕೆ ಆಗಲಿ ಹೋಗಿ ಎಂದು ನಾನೇ ಹೇಳಿದೆ ಎಂದು ತಿಳಿಸಿದ್ದಾರೆ.