ಹೊಸದುರ್ಗ :
ಹೊಸದುರ್ಗ ತಾಲ್ಲೂಕಿನ ಶಾಸಕ ಗೂಳಿಹಟ್ಟಿ ಶೇಖರ್ ಅವರಿಗೆ ಆರೋಗ್ಯದಲ್ಲಿ ಸಮಸ್ಯೆಯಾಗಿದ್ದು ಹೋಂ ಐಸೋಲೇಶನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಸಂಬಂಧಿಸಿದಂತೆ ಸ್ವತಃ ಶಾಸಕರೇ ಸೆಲ್ಫಿ ಮೂಲಕ ವಿಡಿಯೋ ಚಿತ್ರೀಕರಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ ಹರಿಬಿಟ್ಟಿದ್ದಾರೆ. ನನಗೆ ಆರೋಗ್ಯದಲ್ಲಿ ಸಮಸ್ಯೆಯಾಗಿದ್ದು, ಹೋಂ ಐಸೋಲೇಶನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಯಾರು ಕಛೇರಿ ಹಾಗೂ ಮನೆಯ ಹತ್ತಿರ ಕನಿಷ್ಟ ಒಂದು ವಾರಗಳ ಕಾಲ ಆಗಮಿಸಬಾರದೆಂದು ಹೇಳಿದ್ದಾರೆ.
ಇತ್ತೀಚೆಗೆ ಅವರ ಸಂಪರ್ಕದಲ್ಲಿದ್ದವರು ಕೊರೋನಾ ತಪಾಸಣೆ ಮಾಡಿಸಬೇಕೆಂದು ವಿಡಿಯೋದಲ್ಲಿ ಮನವಿ ಮಾಡಿದ್ದು, ತಾಲ್ಲೂಕಿನ ಎಲ್ಲಾ ಗ್ರಾಮಗಳಲ್ಲಿ ಹೆಚ್ಚಾಗಿ ಮಹಾಮಾರಿ ವ್ಯಾಪಿಸಿದ್ದು, ಸಾಮಾಜಿಕ ಅಂತರ ಹಾಗೂ ಮಾಸ್ಕನ್ನು ತಪ್ಪದೇ ಧರಿಸಬೇಕು. ವಿನಃ ಕಾರಣ ಮನೆಯಿಂದ ಹೊರಗಡೆ ಬರಬಾರದೆಂದು ಶಾಸಕರು ಮನವಿ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
