ಬೆಂಗಳೂರು :
ಸಲೂನ್, ಸ್ಪಾ ಹೆಸರಿನಲ್ಲಿ ವೇಶ್ಯವಾಟಿಕೆ ದಂಧೆ ನಡೆಸುತ್ತಿದ್ದ ಮೂವರನ್ನು ಬಂಧಿಸಿ, ಐವರು ಯುವತಿಯರನ್ನು ಸಿಸಿಬಿ ಪೊಲೀಸರು ರಕ್ಷಿಸಿದ್ದಾರೆ.
ಮಾಲೀಕ ಅನೂಪ್ ನೈರ್ (27), ಜಯರಾಮ್ (59),ನವಾಜ್ ಖಾನ್ ಸಿದ್ಧಕ್ (34) ಬಂಧಿತ ಆರೋಪಿಗಳು. ಬಂಧಿತರಿಂದ 2000 ರೂ, 3 ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಮಮೂರ್ತಿ ನಗರದ ವಾವ್ ಸ್ಟೂಡಿಯೋಸ್ ಬ್ಯೂಟಿ ಸೆಲೂನ್,ಸ್ಪಾದಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದರು.
ಹೊರರಾಜ್ಯದ ಯುವತಿಯರನ್ನು ಹೆಚ್ಚು ಹಣ ಗಳಿಸುವ ಆಮಿಷಯೊಡ್ಡಿ ವೇಶ್ಯಾವಾಟಿಕೆ ದಂಧೆ ದೂಡಲಾಗುತ್ತಿತ್ತು ಎಂದು ತನಿಖೆಯಿಂದ ತಿಳಿದು ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ರಾಮಮೂರ್ತಿ ನಗರ ಠಾಣೆಯಲ್ಲಿ 344/2020ಕಲಂ 370 ಐಪಿಸಿ ಮತ್ತು ಕಲಂ 3,4,5,6 ವೈಶ್ಯವಾಟಿಕೆ ನಿರ್ಮೂಲನ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ