ಶಿರಾ
ತಾಲ್ಲೂಕಿನ ಚಂಗಾವರ ಗ್ರಾಮದ ಹೊಸ ಬಡಾವಣೆಯಲ್ಲಿ ಕೆ.ಆರ್.ಐ.ಡಿ.ಎಲ್.ನಿಂದ ಸಿ.ಸಿ.ರಸ್ತೆ ಹಾಗೂ ಚರಂಡಿ ಕಾಮಗಾರಿ ಕೈಗೊಳ್ಳಲಾಗಿದ್ದು ಕಳಪೆ ಕಾಮಗಾರಿಯಿಂದ ಚರಂಡಿಯ ನೀರು ಮುಂದೆ ಸಾಗದೆ ರೋಗ ರುಜಿನಗಳಿಗೆ ಕಾರಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಚಂಗಾವರದ ಹೊಸ ಬಡಾವಣೆಯಲ್ಲಿ ಇತ್ತೀಚೆಗಷ್ಟೆ ಲಕ್ಷಾಂತರ ರೂಗಳ ವೆಚ್ಚದಲ್ಲಿ ಚರಂಡಿ ಹಾಗೂ ಸಿ.ಸಿ. ರಸ್ತೆ ಕಾಮಗಾರಿ ನಡೆಸಲಾಗಿತ್ತು. ಚರಂಡಿಯ ನೀರು ಮುಂದಕ್ಕೆ ಸಾರಾಗವಾಗಿ ಹರಿದು ಹೋಗುವಂತೆ ಚರಂಡಿ ನಿರ್ಮಾಣ ಮಾಡದ ಪರಿಣಾಮ ಮಳೆಯ ನೀರು ಚರಂಡಿಯಲ್ಲಿಯೇ ನಿಂತು ಸೊಳ್ಳೆಗಳ ಕಾಟವೂ ಹೆಚ್ಚಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.ಸೊಳ್ಳೆಗಳ ಕಾಟದಿಂದ ರೋಗರುಜಿನಗಳಿಗೂ ಕಾರಣವಾಗಿದೆಯಲ್ಲದೆ ಸಿ.ಸಿ.ರಸ್ತೆ ಕೂಡಾ ಉತ್ತಮ ಗುಣಮಟ್ಟದಲ್ಲಿ ನಿರ್ಮಾಣವಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದು ಈ ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ