ಕೊಚ್ಚಿ :
ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಗೆ ಕೊಚ್ಚಿಯ ಪ್ರಧಾನ ಸೆಷನ್ಸ್ ನ್ಯಾಯಾಲಯ ಇಂದು ಜಾಮೀನು ಮಂಜೂರು ಮಾಡಿದೆ. ಆದರೆ, ರಾಷ್ಟ್ರೀಯ ತನಿಖಾ ಸಂಸ್ಥೆ ಚಿನ್ನ ಕಳ್ಳಸಾಗಣೆ ಗೆ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಹಿನ್ನೆಲೆಯಲ್ಲಿ, ಆಕೆಯ ವಿರುದ್ಧ ಕಠಿಣ ಕಾನೂನು ಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆಯನ್ನೂ ಸಹ ಜಾರಿ ಮಾಡಲಾಗಿದೆ.
ಸ್ವಪ್ನಾ ಸುರೇಶ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಕಳೆದ ವಾರ ಕಾಯ್ದಿರಿಸಿತ್ತು. ಗಮನಾರ್ಹವೆಂದರೆ, ಕಸ್ಟಮ್ಸ್ ಇಲಾಖೆ ತನಿಖೆ ನಡೆಸುತ್ತಿರುವ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಜಾಮೀನು ಕೂಡ ಪಡೆದಿದ್ದಾರೆ. 60 ದಿನಗಳ ಒಳಗಾಗಿ ಅಂತಿಮ ವರದಿ ಸಲ್ಲಿಸದ ಕಾರಣ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ.
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ ಐಎ), ಜಾರಿ ನಿರ್ದೇಶನಾಲಯ ಮತ್ತು ಕಸ್ಟಮ್ಸ್ ಇಲಾಖೆ ತನಿಖೆ ನಡೆಸುತ್ತಿರುವ ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣವನ್ನು ರಾಜತಾಂತ್ರಿಕ ಮಾರ್ಗಗಳ ಮೂಲಕ ರಾಜ್ಯದಲ್ಲಿ ಚಿನ್ನ ಕಳ್ಳಸಾಗಣೆ ಗೆ ಸಂಬಂಧಿಸಿದ್ದೆಂದು ತಿಳಿದುಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ