ಚುನಾವಣೆ ಪ್ರಕ್ರಿಯೆಗಳ ಜೊತೆಗೆ ಕೋವಿಡ್ ನಿಯಮಗಳಿಗೆ ಹೆಚ್ಚಿನ ಒತ್ತು ನೀಡಿ: ಡಿಸಿ

ಬಳ್ಳಾರಿ

     ಕೋವಿಡ್ ಸಮಯದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಇವಿಎಂ ಬದಲಾಗಿ ಮತಪೆಟ್ಟಿಗೆಗಳನ್ನು ಬಳಸುತ್ತಿರುವುದು ಒಂದು ಸವಾಲಿನ ಕೆಲಸವಾಗಿದ್ದು, ಇಂತಹ ಸಂದರ್ಭದಲ್ಲಿ ಚುನಾವಣೆ ಸಮಯದಲ್ಲಿ ಯಾವುದೇ ರೀತಿತ ಆಡಚಣೆಯಾಗದಂತೆ ಸುಸೂತ್ರ ಚುನಾವಣೆ ನಡೆಸಬೇಕು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಹೇಳಿದರು.

     ನಗರದ ಬಿಡಿಎಎ ಪುಟ್ಬಾಲ್ ಸಭಾಂಗಣದಲ್ಲಿ ಗುರುವಾರ ನಡೆದ ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರದ ಚುನಾವಣೆ-2020 ಹಿನ್ನಲೆ ಅಧಿಕಾರಿಗಳಿಗೆ ಮೊದಲ ಹಂತದ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರದ ಚುನಾವಣೆಯನ್ನು ಅಚ್ಚುಕಟ್ಟಾಗಿ ನಡೆಸುವ ನಿಟ್ಟಿನಲ್ಲಿ ಈಗಾಗಲೇ ಚುನಾವಣಾ ಆಯೋಗದ ನಿರ್ದೇಶನದಂತೆ ಸಕಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ಚುನಾವಣೆ ಪ್ರಕ್ರಿಯೆಗಳ ಜೊತೆಗೆ ಕೊವೀಡ್ ನಿಯಮಗಳಿಗೆ ಹೆಚ್ಚಿನ ಒತ್ತು ನೀಡಬೇಕು. ಕೋವಿಡ್‍ಗೆ ಸಂಬಂಧಿಸಿದಂತೆ ಜಿಲ್ಲಾಡಳಿತದಿಂದ ಕೋವಿಡ್ ಕಿಟ್‍ಗಳನ್ನು ನೀಡಲಾಗುತ್ತದೆ. ಚುನಾವಣೆ ಸಿಬ್ಬಂದಿಗಳಿಗೆ ಕೊವೀಡ್ ಪರೀಕ್ಷೆಗಳನ್ನು ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.

    ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಮಾತನಾಡಿದರು. ತರಬೇತುದಾರರಾದ ಹೆಚ್.ಆರ್.ಪನಮೇಶಲು ಅವರು ಚುನಾವಣಾ ಸಂದರ್ಭದಲ್ಲಿ ಪಿಆರ್‍ಒ ಮತ್ತು ಎಪಿಆರ್‍ಒಗಳ ಕರ್ತವ್ಯಗಳು ಮತ್ತು ಜವಾಬ್ದಾರಿಗಳು ಕುರಿತು ತಿಳಿಸಿದರು.ಈ ಸಂದರ್ಭದಲ್ಲಿ ಬಳ್ಳಾರಿ ತಹಶೀಲ್ದಾರ್ ಯು.ನಾಗರಾಜ್, ಚುನಾವಣೆಗೆ ನಿಯೋಜಿತರಾದ ಪಿಆರ್‍ಒ ಮತ್ತು ಎಪಿಆರ್‍ಒಗಳು ಹಾಗೂ ಚುನಾವಣಾ ಸಿಬ್ಬಂದಿ ಸೇರಿದಂತೆ ಇತರರು ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link