ಕಂಗನಾ ಸಹೋದರಿ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಕೋರ್ಟ್ ಆದೇಶ

ಮುಂಬೈ:

    ಬಾಲಿವುಡ್ ನಟಿ ಕಂಗನಾ ರಣಾವತ್ ಮತ್ತು ಆಕೆಯ ಸೋದರಿ ರಂಗೋಲಿ ಚಾಂಡೆಲ್ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಬಾಂದ್ರಾದಲ್ಲಿನ ಮ್ಯಾಜಿಸ್ಟ್ರೇಟ್ ಕೋರ್ಟ್ ವೊಂದು ಆದೇಶ ನೀಡಿದೆ.

    ಕಂಗನಾ ಮತ್ತು ರಂಗೋಲಿ ಟ್ವೀಟ್ ಮಾಡುವ ಮೂಲಕ ಹಿಂದೂ ಮತ್ತು ಮುಸ್ಲಿಂರ ನಡುವೆ ಕೋಮುಗಲಭೆ, ದ್ವೇಷ ಹರಡಿದ್ದಾರೆ ಎಂದು ದೂರಿ ಅವರಿಬ್ಬರ ವಿರುದ್ಧ ಎಫ್ ಐಆರ್ ದಾಖಲಿಸಲು ನ್ಯಾಯಾಲಯ ಹೇಳಿದೆ.

    ವಿನ್ಯಾಸಕ ಹಾಗೂ ಫಿಟ್ನೆಸ್ ತರಬೇತುದಾರ ಮುನ್ನಾವರಲಿ ಸಯ್ಯದ್ ನೀಡಿದ ದೂರಿಗೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ಜಯದೇವ್ ಘುಲೆ ಈ ಆದೇಶವನ್ನು ನೀಡಿದ್ದಾರೆ.   ಐಪಿಸಿ ಸೆಕ್ಷನ್ 153 ಎ, 295 ಎ( ಧರ್ಮವನ್ನು ಅಪಮಾನಿಸುವ ಮೂಲಕ ಕೋಮು ಭಾವನೆ ಕೆರಳಿಸುವ ಚಟುವಟಿಕೆ) ಮತ್ತು 124ಎ ಅನ್ವಯ ದೇಶದ್ರೋಹದ ಆಧಾರದ ಮೇಲೆ ಪ್ರಕರಣ ದಾಖಲಿಸಬೇಕೆಂದು ಸಯ್ಯದ್ ದೂರಿನಲ್ಲಿ ಕೇಳಿಕೊಂಡಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap