ಬೆಂಗಳೂರು :
ರಾಜರಾಜೇಶ್ವರಿ ನಗರ ಉಪಚುನಾವಣೆಯ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರು ಕೈ ಕೈ ಮಿಲಾಯಿಸಿದ ಘಟನೆ ನಡೆದಿದೆ.
ರಾಜ್ಯದಲ್ಲಿ ಎದುರಾಗಿರೋ ಉಪಚುನಾವಣೆ ಭಾರೀ ಕುತೂಹಲ ಮೂಡಿಸಿದ್ದು ಈಗಾಗಲೇ ಶಿರಾ ಮತ್ತು ಆರ್‌ಆರ್ ನಗರ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರಗಳು ಕಾವು ಪಡೆದಿದೆ. ಈ ಮಧ್ಯೆ ಆರ್‌ಆರ್ ನಗರದ ಲಕ್ಷ್ಮೀದೇವಿನಗರ ಬೂತ್ ನಂಬರ್ 156 ಬಳಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮ ಅವರ ಪರ ಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ವಾರ್ಡ್ ಅಧ್ಯಕ್ಷರಾದ ಜವರೇಗೌಡ, ಕಾರ್ಯಕರ್ತರಾದ ಚಿಕ್ಕರಾಜು, ರಾಕೇಶ್, ವಿನೋದ್, ರೂಪೇಶ್, ಮಾಲಿಕ್ ಮತ್ತು ಇತರ ಮುಖಂಡರ ಮೇಲೆ ಬಿಜೆಪಿ ಅಭ್ಯರ್ಥಿ ಮುನಿರತ್ನಂ ನಾಯ್ಡು ಬೆಂಬಲಿಗರಾದ ವೇಲು ನಾಯ್ಕರ್ ಮತ್ತು 30 ಕ್ಕೂ ಹೆಚ್ಚು ಗೂಂಡಾಗಳು ಹಲ್ಲೆ ನಡೆಸಿರುವ ಗಂಭೀರ ಆರೋಪ ಕೇಳಿ ಬಂದಿದೆ.
ಈ ಗಲಾಟೆಯ ವೇಳೆ ಬೂತ್ ಮಟ್ಟದಲ್ಲಿ ಮತದಾರರಿಗೆ ಗುರುತಿನ ಚೀಟಿ ವಿತರಣೆ ನಡೆಸಲು ಸಂಗ್ರಹಿಸಿದ್ದ ಮಾಹಿತಿಯ ಪುಸ್ತಕವನ್ನೂ ಬಿಜೆಪಿ ಬೆಂಬಲಿಗರು ಹರಿದು ಹಾಕಿದ್ದಾರೆ ಎನ್ನಲಾಗಿದೆ.
ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿಸಿದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ನಂದಿನಿ ಲೇಔಟ್ ಪೊಲೀಸ್ ಠಾಣೆ ಎದುರು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
