ಮಹಾರಾಷ್ಟ್ರ : ಡಿಸಿಎಂಗೆ ಕೊರೋನಾ ಪಾಸಿಟಿವ್..!

ಮುಂಬೈ:

   ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್​ ಪವಾರ್​ ಅವರಿಗೆ ಕೋವಿಡ್​-19 ಪಾಸಿಟಿವ್ ದೃಢಪಟ್ಟಿದ್ದು, ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಂದಹಾಗೆ ಕರೊನಾ ಪಾಸಿಟಿವ್​ ಬಂದಿರುವ ವಿಚಾರವನ್ನು ಪವಾರ್​ ಖುದ್ದು ಟ್ವೀಟ್ ಮೂಲಕ ತಿಳಿಸಿ ಖಚಿತಪಡಿಸಿದ್ದಾರೆ.

   ಸದ್ಯ ಅವರಲ್ಲಿ ಸೋಂಕಿನ ಲಕ್ಷಣಗಳು ಇರದಿದ್ದರೂ ಅವರು ವೈದ್ಯರ ಸಲಹೆ ಮೇರೆಗೆ ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ನನ್ನ ಆರೋಗ್ಯ ಸರಿಯಾಗೇ ಇದೆ, ನನ್ನ ಬಗ್ಗೆ ಯಾರೂ ಚಿಂತಿಸಬೇಕಾಗಿಲ್ಲ. ಸ್ವಲ್ಪ ವಿಶ್ರಾಂತಿಯ ಬಳಿಕ ನಾನು ನಿಮ್ಮೆಲ್ಲರ ನಡುವೆ ಕಾಣಿಸಿಕೊಳ್ಳುತ್ತೇನೆ ಎಂಬುದಾಗಿ ಅವರು ಹೇಳಿಕೊಂಡಿದ್ದಾರೆ.

   ನಾಲ್ಕು ದಿನಗಳ ಹಿಂದೆಯೇ ಜ್ವರ ಕಾಣಿಸಿದ್ದರಿಂದ ಅವರು ಕ್ವಾರಂಟೈನ್​ಗೆ ಒಳಗಾಗಿದ್ದರು. ಆದರೆ ಕರೊನಾ ನೆಗೆಟಿವ್​ ಬಂದಿದೆ ಎಂದು ಅವರ ಪಕ್ಷದ ವಕ್ತಾರರು ಹೇಳಿದ್ದರು. ಅಲ್ಲದೆ ಕಳೆದ ಒಂದು ವಾರದಿಂದ ಅವರು ದೊಡ್ಡ ಸಾರ್ವಜನಿಕ ಕಾರ್ಯಕ್ರಮಗಳಿಂದ ದೂರವೇ ಇದ್ದರು.

   ಅಜಿತ್ ಪವಾರ್ ಸೇರಿ ಮಹಾರಾಷ್ಟ್ರದಲ್ಲಿ 15ಕ್ಕೂ ಅಧಿಕ ಸಚಿವರು ಈಗಾಗಲೇ ಸೋಂಕಿಗೆ ಒಳಗಾದಂತಾಗಿದೆ. ಎರಡು ದಿನಗಳ ಹಿಂದೆ ವಿರೋಧ ಪಕ್ಷದ ನಾಯಕ, ಬಿಜೆಪಿಯ ದೇವೇಂದ್ರ ಫಡ್ನವಿಸ್​ ಅವರಲ್ಲಿ ಸೋಂಕು ದೃಢಪಟ್ಟಿತ್ತು. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link