ಬೆಂಗಳೂರು :
ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಇಬ್ಬರು ಬುಕ್ಕಿಗಳನ್ನು ಬಂಧಿಸಿ 13.5 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ.
ಹೊಯ್ಸಳ ಗೌಡ (48), ನರಸಿಂಹ ಮೂರ್ತಿ (38) ಬಂಧಿತ ಆರೋಪಿಗಳು. ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಬಂಧಿತರಿಂದ 13.5 ಲಕ್ಷ ನಗದು ಹಾಗೂ 2 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ವೈಯಾಲಿಕಾವಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
