ಚಾಮರಾಜನಗರ:
ಗೂಡ್ಸ್ ವಾಹನ, ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಬೈಕ್ ಸವಾರರು ಮೃತಪಟ್ಟಿರುವ ಘಟನೆ
ಕೊಳ್ಳೆಗಾಲ ತಾಲೂಕಿನ ಧನಗೆರೆ-ಸತ್ತೇಗಾಲ ಮುಖ್ಯರಸ್ತೆಯಲ್ಲಿ ಸಂಭವಿಸಿದೆ.
ಮೃತರನ್ನು ಹನೂರು ತಾಲೂಕಿನ ಮಾರ್ಟಳ್ಳಿ ಸಮೀಪದ ಪಳನಿಮೇಡು ಗ್ರಾಮದ ಡೇವಿಡ್, ಸೇತು, ಶೇಷುರಾಜ್ ಎಂದು ಗುರುತಿಸಲಾಗಿದೆ.
ಮೃತರು ಕೊಳ್ಳೇಗಾಲದಿಂದ ಮಳವಳ್ಳಿ ಕಡೆಗೆ ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ಮಳವಳ್ಳಿಯಿಂದ ಕೊಳ್ಳೇಗಾಲ ಕಡೆಗೆ ಬರುತ್ತಿದ್ದ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಸದ್ಯ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಕೊಳ್ಳೆಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ