ಮಂಗಳೂರು :
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಕುಣಿಗಲ್, ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಮತ್ತೆ ಆರಂಭವಾಗಿದೆ.
ಕೋವಿಡ್ ಕಾರಣದಿಂದಾಗಿ ರೈಲು ಸಂಚಾರ ಸ್ಥಗಿತಗೊಂಡಿತ್ತು. ಇದರಿಂದಾಗಿ ಕರಾವಳಿ ಭಾಗದ ಪ್ರಯಾಣಿಕರಿಗೆ ತೊಂದರೆ ಉಂಟಾಗಿತ್ತು. ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಈ ಕುರಿತು ಮಾಹಿತಿ ನೀಡಿದ್ದಾರೆ. “ವಾರದಲ್ಲಿ ನಾಲ್ಕು ದಿನಗಳ ಕಾಲ ರೈಲು ಸಂಚಾರ ನಡೆಸಲಿದ್ದು, ಜನರು ಇದರ ಉಪಯೋಗ ಪಡೆದುಕೊಳ್ಳಬೇಕು” ಎಂದು ಮನವಿ ಮಾಡಿದ್ದಾರೆ.
ಕೊರೋನ ಕಾರಣದಿಂದ ಈ ರೈಲು ರದ್ದಾಗಿತ್ತು. ಆದರೆ ಕರಾವಳಿಯ ಪ್ರಯಾಣಿಕರು ಈ ರೈಲಿನ ಮೂಲಕ ಬೆಂಗಳೂರನ್ನು ಸಂಪರ್ಕಿಸಲು ಸುಲಭ ಸಾಧ್ಯವಾಗಿರುವುದರಿಂದ ಎರಡು ಜಿಲ್ಲೆಗಳಲ್ಲಿ ವಾಸಿಸುವ ಕರಾವಳಿಗರಿಗೆ ರೈಲಿನ ಅವಶ್ಯಕತೆಯನ್ನು ಮನಗಂಡು ರೈಲ್ವೆ ಸಚಿವರು, ಅಧಿಕಾರಿಗಳೊಂದಿಗೆ ಸಂವಹನ ನಡೆಸಿ ಮತ್ತೆ ರೈಲು ಸಂಚರಿಸುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ರಾಜಧಾನಿ ಬೆಂಗಳೂರಿನಿಂದ ಹೊರಡುವ ರೈಲು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಮೂಲಕ ಮಂಗಳೂರನ್ನು ತಲುಪಲಿದೆ. ಈ ರೈಲಿನಿಂದಾಗಿ ಕರಾವಳಿ ಮತ್ತು ಬೆಂಗಳೂರು ನಡುವೆ ಸಂಚಾರ ನಡೆಸುವ ಜನರಿಗೆ ಅನುಕೂಲವಾಗಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ