ಡಿ.7ರವರೆಗೆ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ವಿಸ್ತರಣೆ!!

ಶಿವಮೊಗ್ಗ : 

      ಶಿವಮೊಗ್ಗ ನಗರದಲ್ಲಿ 2 ಗುಂಪಿನ ಮಧ್ಯೆ ನಡೆದ ಕೋಮುಗಲಭೆ ಘಟನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆಯನ್ನು ಡಿಸೆಂಬರ್ 7ರವರೆಗೆ ವಿಸ್ತರಣೆ ಮಾಡಿ ತಹಶೀಲ್ದಾರ್ ನಾಗರಾಜ್ ಆದೇಶಿಸಿದ್ದಾರೆ.

      ಬಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆಯಿಂದ ಉಂಟಾಗಂತ ಉದ್ವಿಗ್ನ ಪರಿಸ್ಥಿತಿ ನಿಯಂತ್ರಿಸಲು, ಶಿವಮೊಗ್ಗದಲ್ಲಿ ಡಿಸೆಂಬರ್ 3ರಂದು ಡಿಸೆಂಬರ್ 5ರ ಬೆಳಿಗ್ಗೆ 10 ಗಂಟೆಯವರೆಗೆ 144 ಸೆಕ್ಷನ್ ಅಡಿಯಲ್ಲಿ ತಹಶೀಲ್ದಾರ್ ನಾಗರಾಜ್ ನಿಷೇಧಾಜ್ಞೆ ಜಾರಿಗೊಳಿಸಿದ್ದರು.

     ನಗರದಲ್ಲಿ ಪರಿಸ್ಥಿತಿ ಇನ್ನೂ ಬೂದಿ ಮುಚ್ಚಿದ ಕೆಂಡದಂತೆ ಇರುವ ಕಾರಣ, ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆಯನ್ನು ಡಿಸೆಂಬರ್ 7ರವರೆಗೆ ವಿಸ್ತರಣೆ ಮಾಡಿ ತಹಶೀಲ್ದಾರ್ ನಾಗರಾಜ್ ಆದೇಶಿಸಿದ್ದಾರೆ. ಈ ಮೊದಲು ಯಾವೆಲ್ಲಾ ಮಾರ್ಗಸೂಚಿ ಕ್ರಮಗಳನ್ನು ಪಾಲಿಸಬೇಕು ಎಂದು ಹೇಳಲಾಗಿತ್ತೋ, ಅವುಗಳನ್ನು ಪಾಲಿಸುವಂತೆ ಸೂಚಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link