ಕುಣಿಗಲ್ : ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಲು ಒತ್ತಾಯ

 ಕುಣಿಗಲ್ : 

      ರೈತ ವಿರೋಧಿ ಕಾಯ್ದೆಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಲೇ ಕೈಬಿಡಬೇಕೆಂದು ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯ ತಾಲೂಕು ಅಧ್ಯಕ್ಷ ಅನಿಲ್ ಕುಮಾರ್ ಒತ್ತಾಯಪಡಿಸಿದರು.

      ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತ ವಿರೋಧಿ ಕಾನೂನನ್ನು ವಿರೋಧಿಸಿ ತಾಲೂಕಿನ ರೈತರು ಭಾರತ ಬಂದ್ ಬೆಂಬಲಿಸಿ ಪ್ರತಿಭಟನೆ ನಡೆಸಿದವು. ಭಾರತ ಕಿಸಾನ್ ಸಂಘ ಹಾಗೂ ರೈತ ಸಂಘ ಸಂಯುಕ್ತ ಆಶ್ರಯದಲ್ಲಿ ಭಾರತ್ ಬಂದ್ ಅಂಗವಾಗಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ರೈತರು ಪ್ರತಿಭಟನೆ ನಡೆದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು, ಈಗಾಗಲೇ ದೆಹಲಿಯಲ್ಲಿ ರೈತರು ಚಳಿಯಲ್ಲಿ ಹೋರಾಟವನ್ನು ನಡೆಸುತ್ತಿದ್ದಾರೆ. ಇಂತಹ ಶಾಸನಗಳಿಂದ ರೈತರು ಭೂಮಿಗಳನ್ನು ಕಳೆದುಕೊಳ್ಳುವ ಭೀತಿಯಿದ್ದು ಭೂಸುಧಾರಣೆ ಕಾಯ್ದೆ, ವಿದ್ಯುತ್ ಖಾಸಗೀಕರಣದ ಎಪಿಎಂಸಿ ಕಾಯ್ದೆ ಸೇರಿದಂತೆ ಹಲವಾರು ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ರೈತರ ಮರಣ ಶಾಸನ ಬರೆಯುತ್ತಿದೆ ಎಂದು ಹೇಳಿದರು.

      ಕೋವಿಡ್ 19ರ ಸಂದರ್ಭದಲ್ಲಿ ಬಹುಸಂಖ್ಯಾತ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದು ಕಾರ್ಪೋರೇಟ್ ಕಂಪನಿಗಳಿಗೆ ಅನುಕೂಲ ಕಲ್ಪಿಸುವ ವ್ಯವಸ್ಥೆಯನ್ನು ಜಾರಿಗೆ ತಂದಿರುವುದನ್ನು ಕೂಡಲೇ ಹಿಂತೆಗೆದುಕೊಳ್ಳಬೇಕು, ರೈತರನ್ನು ದಿಕ್ಕು ತಪ್ಪಿಸುವ, ಹೋರಾಟನಿರತ ರೈತರ ಮೇಲೆ ದಬ್ಬಾಳಿಕೆ ದೌರ್ಜನ್ಯ ನಡೆಸುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

      ತಾಲೂಕಿನ ಮಾರ್ಕೋನಹಳ್ಳಿ ಜಲಾಶಯದ ಹಿಂಭಾಗದಲ್ಲಿ ಕೈಗಾರಿಕಾ ಪ್ರದೇಶವನ್ನು ಸ್ಥಾಪಿಸಲು ಹೊರಟಿರುವುದನ್ನು ಕೂಡಲೇ ಕೈಬಿಡಬೇಕು ಎಂದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿರೋಧಿ ಕಾಯ್ದೆಗಳನ್ನು ಕೂಡಲೇ ವಾಪಸ್ ಪಡೆಯುವಂತೆ ಒತ್ತಾಯಿಸಿದರು.

     ಈ ಸಂದರ್ಭದಲ್ಲಿ ಪ್ರಗತಿಪರ ಹೋರಾಟಗಾರ ನಾಗಣ್ಣ ಮಾತನಾಡಿದರು. ಅಂಗನವಾಡಿ ನೌಕರರ ಸಂಘದ ಅಧ್ಯಕ್ಷರಾದ ಗೌರಮ್ಮ ಕಾರ್ಮಿಕ ಸಂಘದ ಕೃಷ್ಣರಾಜು ನಿಡಸಾಲೆ ಪ್ರಸಾದ್ ಅಬ್ದುಲ್ ಮುನಾಫ್ ಸೇರಿದಂತೆ ನೂರಾರು ರೈತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗ ಮನವಿ ಸಲ್ಲಿಸಿದರು. ಬಂದ್ ನಡುವೆ ಪಟ್ಣದಲ್ಲಿ ಎಂದಿನಂತೆ ಹೋಟೆಲ್, ಅಂಗಡಿ ಮುಂಗಟ್ಟುಗಳು ತೆರೆದು, ವ್ಯಾಪಾರವಹಿವಾಟು ನಡೆದವು. ಬಸ್ ಹಾಗೂ ವಾಹನ ಸಂಚಾರ ಸಹಜವಾಗಿತ್ತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link