ಬೆಂಗಳೂರು :
ಆರ್ಎಸ್ಎಸ್ ನಾಯಕ ಹಾಗೂ ಅಮಿತ್ ಶಾ, ಜೆಪಿ ನಡ್ಡಾ ಸೇರಿ ಇತರೆ ಬಿಜೆಪಿ ನಾಯಕರ ಹೆಸರು ಹೇಳಿಕೊಂಡು ಜನರನ್ನು ವಂಚಿಸುತ್ತಿದ್ದ ಯುವರಾಜ್ ಎಂಬಾತನ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಯುವರಾಜ್, ಬಿಜೆಪಿ ನಾಯಕರೊಂದಿಗೆ ಭಾವಚಿತ್ರ ತೆಗೆಸಿಕೊಂಡು ತಾನು ಬಹಳಷ್ಟು ಮಂದಿ ಬಿಜೆಪಿ ನಾಯಕರೊಂದಿಗೆ ಆತ್ಮೀಯನಾಗಿದ್ದೇನೆ ಎಂದು ನಂಬಿಸುತ್ತಿದ್ದನು.
ಕೆಎಸ್ಆರ್ಟಿಸಿ ಅಧ್ಯಕ್ಷ ಸ್ಥಾನ ಕೊಡಿಸುವುದಾಗಿ ಹೇಳಿ ನನ್ನಿಂದ ಹಣ ಪಡೆದಿದ್ದು, ನಂತರ ಯಾವುದೇ ಹುದ್ದೆ ಕೊಡಿಸದೇ ವಂಚಿಸಿದ್ದಾನೆ ಎಂದು ಆರೋಪಿಸಿ ಯುವರಾಜ್ ವಿರುದ್ಧ ಇತ್ತೀಚಿಗೆ ಉದ್ಯಮಿ ಸುಧೀಂದ್ರ ರೆಡ್ಡಿ ಎಂಬುವವರು ಸಿಸಿಬಿ ಗೆ ದೂರು ನೀಡಿದ್ದರು.
ಈ ಕುರಿತು ಮಾಹಿತಿ ಪಡೆದ ಸಿಸಿಬಿ ಪೊಲೀಸರು, ಯುವರಾಜ್ ನಿವಾಸದ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ತನಿಖೆ ವೇಳೆ ಈತ ಬಹುತೇಕ ಜನರಿಂದ ಕೋಟ್ಯಂತರ ರೂ. ಹಣ ಪಡೆದು ವಂಚನೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಸದ್ಯ ಆತನನ್ನು ವಶಕ್ಕೆ ಪಡೆದು ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ