ನವದೆಹಲಿ :

ಮನೆಯ ಮೇಲ್ಛಾವಣಿ ಕುಸಿದು ನಾಲ್ವರು ಮೃತಪಟ್ಟಿರುವ ಘಟನೆ ಪಶ್ಚಿಮ ದೆಹಲಿಯ ವಿಷ್ಣು ಗಾರ್ಡನ್ ಪ್ರದೇಶದಲ್ಲಿ ನಡೆದಿದೆ.
ಹಳೆಯ ಕಟ್ಟಡವನ್ನು ಮೋಟಾರ್ ವೈಂಡಿಂಗ್ ಫ್ಯಾಕ್ಟರಿಯಾಗಿ ಬಳಸಲಾಗುತ್ತಿತ್ತು. ಘಟನೆ ನಡೆದ ವೇಳೆ 6 ಮಂದಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು.
ಘಟನೆಯಲ್ಲಿ ಈ 6 ಮಂದಿ ಗಾಯಗೊಂಡಿದ್ದು, 6 ಮಂದಿಯಲ್ಲಿ ನಾಲ್ವರು ಸಾವನ್ನಪ್ಪಿದ್ದರೆ, ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಆರು ಮಂದಿಯಲ್ಲಿ ಐವರನ್ನು ಡಿಡಿಯು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಬ್ಬರು ದೆಹಲಿಯ ಗುರು ಗೋವಿಂದ್ ಸಿಂಗ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿ ಅಗ್ನಿಶಾಮಕ ದಳಕ್ಕೆ ಬೆಳಗ್ಗೆ 10 ಗಂಟೆ ಸುಮಾರಿಗೆ ಕರೆ ಬಂದಿದ್ದು, ನಾಲ್ಕು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








