ಮಡಿಕೇರಿ :
‘ಕೊಡವರು ಗೋಮಾಂಸ ಸೇವಿಸುತ್ತಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೊಡವರು ಪ್ರತಿಭಟನೆ ನಡೆಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಮುಂದೆ ಕೊಡವ ಸಮುದಾಯದವರು ಪ್ರತಿಭಟನೆ ನಡೆಸಿದ್ದು, ‘ಸಿದ್ದರಾಮಯ್ಯ ಹೇಳಿಕೆಯಿಂದ ಕೊಡವ ಸಮುದಾಯಕ್ಕೆ ಅಪಮಾನವಾಗಿದೆ ಹಾಗಾಗಿ ಕೂಡಲೇ ಸಿದ್ದರಾಮಯ್ಯ ಬಹಿರಂಗವಾಗಿ ಕೊಡವರ ಕ್ಷಮೆ ಕೋರಬೇಕು ಮತ್ತು ತಮ್ಮ ಹೇಳಿಕೆಯನ್ನು ಹಿಂಪಡಿಯಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಕೊಡವರೂ ಬೀಪ್ ತಿನ್ನುತ್ತಾರೆ ಎಂಬ ನನ್ನ ಹೇಳಿಕೆ ತಪ್ಪುಗ್ರಹಿಕೆಯಿಂದ ಮಾಧ್ಯಮಗಳಲ್ಲಿ ವರದಿಯಾಗಿದೆ.
ಇದರಿಂದ ಕೊಡವ ಸಮುದಾಯಕ್ಕೆ ನೋವಾಗಿದ್ದರೆ ಈ ಬಗ್ಗೆ ನಾನು ವಿಷಾದಿಸುತ್ತೇನೆ.ನನ್ನ ನೆರೆಯ ಜಿಲ್ಲೆಯಾದ ಕೊಡಗಿನ ಸಂಸ್ಕೃತಿ ಬಗ್ಗೆ ನನಗೆ ಅರಿವಿದೆ, ವಿಶೇಷವಾದ
ಗೌರವವೂ ಇದೆ.— Siddaramaiah (@siddaramaiah) December 19, 2020
ಜಿಲ್ಲಾಧಿಕಾರಿ ಕಚೇರಿ ಮುಂದೆ ಮಡಿಕೇರಿ ಕೊಡವ ಸಮಾಜ, ಪೊನ್ನಂಪೇಟೆ ಕೊಡವ ಸಮಾಜ, ಮಡಿಕೇರಿ ಹಿತ ರಕ್ಷಣಾ ವೇದಿಕೆ ಮತ್ತಿತರ ಸಂಘಟನೆ ಸದಸ್ಯರು ಜಮಾವಣೆಗೊಂಡು ಘೋಷಣೆ ಕೂಗಿ ಸಿದ್ದರಾಮಯ್ಯ ಹೇಳಿಕೆಯನ್ನು ಖಂಡಿಸಿದರು. ಕಾವೇರಿ ಮಾತೆ, ಇಗ್ಗುತ್ತಪ್ಪ, ಕೊಡವ ಕುಲಕ್ಕೆ ಪ್ರತಿಭಟನಕಾರರು ಜಯಕಾರ ಹಾಕಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ